ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸೆಂಟ್ರಲ್ ಬೋರ್ಡ್ ಆಫ್ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.
ತೆರಿಗೆ ಸಹಾಯಕ ಮತ್ತು ಸ್ಟೆನೋಗ್ರಾಫರ್ ಹುದ್ದೆಯು ಸೆಂಟ್ರಲ್ ಬೋರ್ಡ್ ಆಫ್ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ನಲ್ಲಿ ಖಾಲಿ ಇದ್ದು ಈ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ನೇಮಕಾತಿಗೆ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಮಾಹಿತಿ :
ಸೆಂಟ್ರಲ್ ಬೋರ್ಡ್ ಆಫ್ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ಹುದ್ದೆಗಳ ಬಗ್ಗೆ ಆಸಕ್ತಿ ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಗಳು ಈ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು ಯಾವುವು ಹೇಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ವಯೋಮಿತಿ ಏನು? ಹಾಗೂ ಅರ್ಜಿ ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ನ ಬಗ್ಗೆ ಮಾಹಿತಿಯನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಯಬಹುದು.
ಹುದ್ದೆಗಳ ವಿವರ :
ಖಾಲಿ ಇರುವ ಹುದ್ದೆಯ ಹೆಸರು | ತೆರಿಗೆ ಸಹಾಯಕ ಮತ್ತು ಸ್ಟೆನೋಗ್ರಾಫರ್ |
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ | 16 |
ಉದ್ಯೋಗದ ಸ್ಥಳ | ಬೆಂಗಳೂರು ಕರ್ನಾಟಕ |
ಅಧಿಕೃತ ವೆಬ್ ಸೈಟ್ | https://cbic.gov.in/ |
ಅಭ್ಯರ್ಥಿಗಳು ಈ ವೆಬ್ ಸೈಟಿಗೆ ಭೇಟಿ ನೀಡಿ ಅಧಿಸೂಚನೆಯಲ್ಲಿ ಏನೆಲ್ಲ ಮಾಹಿತಿಗಳು ಇದೆ ಎಂಬುದರ ಬಗ್ಗೆ ತಿಳಿದುಕೊಳ್ಳಬಹುದು.
ಹುದ್ದೆಗಳ ಸಂಖ್ಯೆ :
ತೆರಿಗೆ ಸಹಾಯಕ ಹುದ್ದೆ | 8 |
ಸ್ಟೆನೊಗ್ರಾಫರ್ | 2 : 1 |
ಹವಾಲ್ದಾರ್ | 7 |
ಶೈಕ್ಷಣಿಕ ಅರ್ಹತೆ :
ಸಿ ಬಿ ಐ ಸಿ ಯಲ್ಲಿ ಖಾಲಿ ಇರುವಂತಹ ತೆರಿಗೆ ಸಹಾಯಕ ಮತ್ತು ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
- 10ನೇ ತರಗತಿ
- 12ನೇ ತರಗತಿ
- ಪದವಿ
ಈ ಮೇಲಿನ ಯಾವುದಾದರೂ ಒಂದು ಶೈಕ್ಷಣಿಕ ಅರ್ಹತೆಯನ್ನು ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ :
CBIC ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು 09-08-2024 ರಂತೆ ಮತ್ತು ಗರಿಷ್ಟ 27 ವರ್ಷಗಳನ್ನು ಹೊಂದಿರಬೇಕೆಂದು ಸಿಬಿಐಸಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
ಅರ್ಜಿ ಶುಲ್ಕದ ವಿವರ :
ಸಿಬಿ ಐಸಿಯಲ್ಲಿ ಖಾಲಿ ಇರುವಂತಹ ತೆರಿಗೆ ಸಹಾಯಕ ಮತ್ತು ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅಗತ್ಯವಿಲ್ಲವೆಂದು ಸಿಬಿಐಸಿ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಸ್ಪಷ್ಟಪಡಿಸಲಾಗಿದೆ.
ವೇತನ ಶ್ರೇಣಿ :
ಸಿಬಿಐಸಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅನುಸಾರವಾಗಿ ಅಭ್ಯರ್ಥಿಗಳಿಗೆ ಆಯ್ಕೆಯಾದ ನಂತರ ಪ್ರತಿ ತಿಂಗಳು 18,000 ದಿಂದ 81,000 ವೇತನವನ್ನು ಸಿಬಿಐಸಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ನಿಗದಿಪಡಿಸಲಾಗಿದೆ.
ಆಯ್ಕೆಯ ವಿಧಾನ :
ಸಿಬಿಐಸಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳನ್ನು ಈ ಕೆಳಗಿನ ವಿಧಾನಗಳ ಮೂಲಕ ಸಿಬಿಐಸಿ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.
- ಕ್ರೀಡಾ ಪ್ರಯೋಗಗಳು.
- ದೈಹಿಕ ಗುಣಮಟ್ಟದ ಪರೀಕ್ಷೆ.
- ಡಾಕ್ಯುಮೆಂಟ್ ಪರಿಶೀಲನೆ.
- ವೈದ್ಯಕೀಯ ಪರೀಕ್ಷೆ.
ಅರ್ಜಿ ಸಲ್ಲಿಸುವ ವಿಧಾನ :
ಸೆಂಟ್ರಲ್ ಬೋರ್ಡ್ ಆಫ್ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಿಧಾನದ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಸಿಬಿಐಸಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ಸಿಬಿಐ ಸಿನ ಅಧಿಕೃತ ವೆಬ್ಸೈಟ್ https://cbic.gov.in/
- ಈ ವೆಬ್ ಸೈಟಿಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಅಗತ್ಯ ದಾಖಲಾತಿಗಳೊಂದಿಗೆ ಅಭ್ಯರ್ಥಿಗಳು 09-08-2024 ಈ ದಿನಾಂಕದೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಕಳುಹಿಸುವಂತಹ ವಿಳಾಸ :
The sports officer
Office of the commissioner of Central taxes
Bengaluru north commissionrate
Number 59 Ground floor
HMT bhavan
Ganganagar Bengaluru – 560032
ಹೆಚ್ಚಿನ ಮಾಹಿತಿ :
ಅಧೀಕೃತ ಅಧಿಸೂಚನೆ | PDF ನೋಡಿ |
ಅಧೀಕೃತ ಜಾಲತಾಣ | ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
ಸಿಬಿಐಸಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕದ ಬಗ್ಗೆ ಈ ಕೆಳಗಿನಂತೆ ತಿಳಿದುಕೊಳ್ಳಬಹುದು
- ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 19-06-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-08-2024
ಈ ದಿನಾಂಕದೊಳಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಇವತ್ತಿನ ಈ ಲೇಖನದಲ್ಲಿ ಸೆಂಟ್ರಲ್ ಬೋರ್ಡ್ ಆಫ್ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ನಲ್ಲಿ ಖಾಲಿ ಇರುವಂತಹ ತೆರಿಗೆ ಸಹಾಯಕ ಮತ್ತು ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಧಿಸೂಚನೆಯನ್ನು ಹೊರಡಿಸಿರುವುದರ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಬ್ಯಾಂಕಿಂಗ್ ಕ್ಷೇತ್ರದಲ್ಲಿ ಖಾಲಿ ಹುದ್ದೆಗಳು : ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆ
- ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್