Bank of Baroda ನೇಮಕಾತಿ : ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನ ನಡೆಸುವವರಿಗೆ ಸಿಹಿ ಸುದ್ದಿ!

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ವೃತ್ತಿ ಜೀವನವನ್ನು ನಡೆಸಬೇಕೆಂಬ ಕನಸು ಹೊಂದಿರುವ ಪ್ರತಿಯೊಬ್ಬರಿಗೂ ಇವತ್ತಿನ ಲೇಖನದಲ್ಲಿ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಉದ್ಯೋಗದ ನೇಮಕಾತಿ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.

Bank of Baroda Recruitment Information 2024
Bank of Baroda Recruitment Information 2024

ಅದರಂತೆ ಮ್ಯಾನೇಜರ್ ಕ್ರೆಡಿಟ್ ವಿಶ್ಲೇಷಕ ಹುದ್ದೆಗಳು ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇದ್ದು ಈ ಹುದ್ದೆಗಳಿಗೆ ಇದೀಗ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಆಸಕ್ತಿ ಹೊಂದಿರುವ ಹಾಗೂ ಅರ್ಹ ಅಭ್ಯರ್ಥಿಗಳು ಈ ಲೇಖನವನ್ನು ಸಂಪೂರ್ಣವಾಗಿ ಓದುವುದರ ಮೂಲಕ ಬ್ಯಾಂಕ್ ಆಫ್ ಬರೋಡದಲ್ಲಿ ಯಾವೆಲ್ಲ ಹುದ್ದೆಗಳು ಖಾಲಿ ಇವೆ ಎಷ್ಟು ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನು? ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಹಾಗೂ ಯಾವ ರೀತಿಯಾಗಿ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರವಾಗಿ ತಿಳಿದುಕೊಳ್ಳಬಹುದು.

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಹುದ್ದೆಗಳು :

ಕೆಲವೊಂದು ಬ್ಯಾಂಕುಗಳು ತಮ್ಮ ಶಾಖೆಗಳಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸುತ್ತಿದ್ದು ಇದೀಗ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅದರಂತೆ ಹುದ್ದೆಗಳಿಗೆ ಸಂಬಂಧಿಸಿದ ಕೆಲವೊಂದು ವಿವರಗಳನ್ನು ನೋಡುವುದಾದರೆ.

ಹುದ್ದೆಯ ಹೆಸರುಮ್ಯಾನೇಜರ್ ಹಾಗೂ ಕ್ರೆಡಿಟ್ ವಿಶ್ಲೇಷಕ
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ 627
ಉದ್ಯೋಗದ ಸ್ಥಳಭಾರತದಾದ್ಯಂತ

ಒಟ್ಟು ಬ್ಯಾಂಕ್ ಆಫ್ ಬರೋಡದಲ್ಲಿ 627 ಹುದ್ದೆಗಳು ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಲಾಗಿದೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ :

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಮ್ಯಾನೇಜರ್ ಹಾಗೂ ಕ್ರೆಡಿಟ್ ವಿಶ್ಲೇಷಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅದರಂತೆ ಯಾವುದೇ ಮಾನ್ಯತೆ ಪಡೆದ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಅಭ್ಯರ್ಥಿಗಳು ಪದವಿ ಸ್ನಾತಕೋತ್ತರ ಪದವಿ ಡಿಪ್ಲೋಮೋ ಸಿಎ ಸಿ ಎಫ್ ಎ ,ಸಿ ಎಂ ಎ, ಸಿ ಎಸ್, ಬಿಸಿಎ, ಬಿ ಎಸ್ಸಿ, ಬಿಇ, ಬಿ ಟೆಕ್, ಎಂಸಿಎ, ಎಂಬಿಎ, ಎಂ ಇ ಹೀಗೆ ಯಾವುದಾದರೂ ಒಂದು ಹುದ್ದೆಯನ್ನು ಅಭ್ಯರ್ಥಿಗಳು ಪೂರ್ಣಗೊಳಿಸಿರಬೇಕೆಂದು ಬ್ಯಾಂಕ್ ಆಫ್ ಬರೋಡ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.

ವಯಸ್ಸಿನ ಮಿತಿ :

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಯ ಕನಿಷ್ಠ ವಯಸ್ಸು ಹಾಗೂ ಗರಿಷ್ಠ ವಯಸ್ಸನ್ನು ತಿಳಿಸಲಾಗಿದ್ದು ಕನಿಷ್ಠ 22 ವರ್ಷಗಳು ಮತ್ತು ಗರಿಷ್ಠ ಅರವತ್ತು ವರ್ಷಗಳು ಹೊಂದಿರಬೇಕೆಂದು ಬ್ಯಾಂಕ್ ಆಫ್ ಬರೋಡ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.

ಅದರ ಜೊತೆಗೆ ವರ್ಗಗಳಿಗೆ ಅನುಸಾರವಾಗಿ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ ಎಂಬುದರ ಮಾಹಿತಿಯನ್ನು ಕೂಡ ಅಧಿಸೂಚನೆಯಲ್ಲಿ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ. ಅದರಂತೆ ಯಾವ ವರ್ಗಗಳಿಗೆ ಎಷ್ಟು ವರ್ಷ ವಯಸ್ಸಿನ ಮಿತಿ ಸಡಿಲಿಕೆ ಮಾಡಲಾಗಿದೆ ಎಂದು ನೋಡುವುದಾದರೆ,

  1. 3 ವರ್ಷಗಳು : OBC ಅಭ್ಯರ್ಥಿಗಳಿಗೆ
  2. 5 ವರ್ಷಗಳು : SC-ST ಅಭ್ಯರ್ಥಿಗಳಿಗೆ
  3. 10 ವರ್ಷಗಳು : PW ಅಥವಾ ಸಾಮಾನ್ಯ PWS ಅಭ್ಯರ್ಥಿಗಳಿಗೆ
  4. 13 ವರ್ಷಗಳು : PW OBC ಅಭ್ಯರ್ಥಿಗಳಿಗೆ
  5. 15 ವರ್ಷಗಳು : PW SC-ST ಅಭ್ಯರ್ಥಿಗಳಿಗೆ
    ಹೀಗೆ ವರ್ಗಗಳಿಗೆ ಅನುಸಾರವಾಗಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಶುಲ್ಕದ ವಿವರ :

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಅದರಂತೆ ಎಷ್ಟು ಅರ್ಜಿ ಶುಲ್ಕ ಯಾವ ವರ್ಗದ ಅಭ್ಯರ್ಥಿಗಳಿಗೆ ಎಂದು ನೋಡುವುದಾದರೆ,

  1. 600 ರೂಪಾಯಿ : ಸಾಮಾನ್ಯ OBC ಅಭ್ಯರ್ಥಿಗಳಿಗೆ
  2. 100 ರೂಪಾಯಿ : SC-ST ಮತ್ತು PWDಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಈ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಆನ್ಲೈನ್ ಮುಖಾಂತರವೇ ಪಾವತಿ ಮಾಡಬೇಕು.

ವೇತನ ಶ್ರೇಣಿ :

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಒಟ್ಟು 627 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ ಮಾಸಿಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ ಅದರಂತೆ ಮಾಸಿಕ 4 ಲಕ್ಷದಿಂದ 55 ಲಕ್ಷದವರೆಗೆ ವೇತನವನ್ನು ಬ್ಯಾಂಕ್ ಆಫ್ ಬರೋಡ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ ನಿಗದಿಪಡಿಸಲಾಗಿದೆ.

ಆಯ್ಕೆಯ ವಿಧಾನ :

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಆನ್ಲೈನ್ ಪರೀಕ್ಷೆ ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಬ್ಯಾಂಕ್ ಆಫ್ ಬರೋಡ ನೇಮಕಾತಿಯಾ ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.

ಹಾಗಾಗಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ :

  • ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ ಹಾಗೂ ಆಫ್ಲೈನ್ ಮೂಲಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
  • ಅದರಂತೆ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • ಬ್ಯಾಂಕ್ ಆಫ್ ಬರೋಡದ ಅಧಿಕೃತ ವೆಬ್ಸೈಟ್ https://www.bankofbaroda.in/ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಹಾಗೂ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ ಸೂಕ್ತವಾಗಿ ಮಾಹಿತಿಯನ್ನು ತಿಳಿದುಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
  • ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಉದ್ಯೋಗಗಳ ಮಾಹಿತಿಯನ್ನು ತಿಳಿದುಕೊಂಡು ಅರ್ಹತೆಗಳನ್ನು ಪರಿಶೀಲಿಸಿ ತಮ್ಮ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
  • ಯಾವುದೇ ತಪ್ಪುಗಳಿಲ್ಲದೆ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಭರ್ತಿ ಮಾಡಬೇಕು ಹಾಗೂ ಕೊನೆಯ ದಿನಾಂಕದ ಮೊದಲು ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಅರ್ಜಿ ನಮೂನೆಯನ್ನು ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ ಅಥವಾ ಸ್ವೀಕಾರ ಸಂಖ್ಯೆಯನ್ನು ಅಭ್ಯರ್ಥಿಗಳು ಸುರಕ್ಷಿತವಾಗಿ ಇರಿಸಿಕೊಳ್ಳಬೇಕು. ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಹೆಚ್ಚಿನ ಮಾಹಿತಿ :

ಅಧೀಕೃತ ಜಾಲತಾಣಇಲ್ಲಿದೆ ನೋಡಿ
ಅಧಿಸೂಚನೆ PDF ನೋಡಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಒಟ್ಟು 627 ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬೇಕು. ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಪ್ರಮುಖ ದಿನಾಂಕಗಳ ಬಗ್ಗೆ ತಿಳಿದುಕೊಂಡಿರಬೇಕಾಗುತ್ತದೆ.

ಅದರಂತೆ ಪ್ರಮುಖ ದಿನಾಂಕಗಳು ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಇರುವ ಕೊನೆಯ ದಿನಾಂಕದ ಬಗ್ಗೆ ಮಾಹಿತಿಯನ್ನು ನೋಡುವುದಾದರೆ,

  1. ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ :12-06-2024
  2. ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :02-07-2024
  3. ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಇರುವ ಕೊನೆಯ ದಿನಾಂಕ :02-07-2024
    ಈ ದಿನಾಂಕದೊಳಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಒಟ್ಟಾರೆ ಭಾರತದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ ಆಫ್ ಬರೋಡ ತನ್ನ ಶಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ, ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಅದರಂತೆ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡುವ ಮೂಲಕ ಅವರು ಕೂಡ ಬ್ಯಾಂಕ್ ಆಫ್ ಬರೋಡದಲ್ಲಿ ನೇಮಕಾತಿ ಪಡೆದು ಹೆಚ್ಚಿನ ಸಂಭಾವನೆಯನ್ನು ಪಡೆದುಕೊಳ್ಳಲು ನೀವು ಸಹಾಯ ಮಾಡಿದಂತಾಗುತ್ತದೆ. ಹಾಗಾಗಿ ಈ ಮಾಹಿತಿಯ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡಿ ಇದರಿಂದ ಅವರು ಕೂಡ ತಮ್ಮ ಅರ್ಹತೆ ಹಾಗೂ ಆಸಕ್ತಿಗೆ ಅನುಗುಣವಾಗಿ ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗವನ್ನು ಪಡೆದುಕೊಳ್ಳಲಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh