ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಯಾವಾಗ ಹಣ ಸಿಗಲಿದೆ ಎಂಬುದರ ಬಗ್ಗೆ. ಸದ್ಯ ಇದೀಗ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡಲು ತಡ ಮಾಡುತ್ತಿದೆ.
ಅಂದರೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ 11ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರದಿಂದ ತಡವಾಗುತ್ತಿತ್ತು ಯಾವ ದಿನದಂದು ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ವರ್ಗಾವಣೆ ಆಗಬಹುದು ಎಂಬುದರ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತಿದೆ.
ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ :
ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣವು ಜಮಾ ಇರುವುದಿಲ್ಲ ಅಂದರೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ 10 ಕಂತುಗಳಲ್ಲಿ 20,000ಗಳ ಹಣವನ್ನು ವರ್ಗಾವಣೆ ಮಾಡಲಾಗಿತ್ತು. 20,000ಗಳ ಹಣವನ್ನು ಹೆಚ್ಚಿನ ಮಟ್ಟದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಪಡೆದುಕೊಂಡಿದ್ದಾರೆ ಆದರೆ ಇದು ಈಗ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಬರುವುದರಲ್ಲಿ ತುಂಬಾ ವಿಳಂಬವಾಗುತ್ತಿದೆ.
ಇದಕ್ಕೆ ಕಾರಣವನ್ನು ರಾಜ್ಯ ಸರ್ಕಾರ ಇದುವರೆಗೂ ಸೂಕ್ತವಾದ ಮಾಹಿತಿಯನ್ನು ನೀಡಿರುವುದಿಲ್ಲ. ಆದರೆ ಇನ್ನೇನು ಎರಡು ಮೂರು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವು ಕೂಡ ಜಮಾ ಆಗಲಿದೆ. ಈ ಕೆಳಗಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಕೆಲವೊಂದು ಪ್ರಶ್ನೆಗಳಿಗೆ ಉತ್ತರವನ್ನು ಕೂಡ ನೀಡಲಾಗುತ್ತಿದ್ದು ಆ ಪ್ರಶ್ನೆಗಳು ಯಾವುವು ಎಂಬುದರ ಬಗ್ಗೆಯೂ ಕೂಡ ನೀವು ತಿಳಿದುಕೊಳ್ಳಬೇಕಾದರೆ ಈ ಕೆಳಗಿನ ಲೇಖನವನ್ನು ಸಂಪೂರ್ಣವಾಗಿ ಓದಬೇಕು.
ಗೃಹಲಕ್ಷ್ಮಿ ಯೋಜನೆಯ ಕೆಲವೊಂದು ಪ್ರಶ್ನೆಗಳು :
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸಾಕಷ್ಟು ಮಹಿಳೆಯರಲ್ಲಿ ಹಲವು ಪ್ರಶ್ನೆಗಳು ಮೂಡಿದ್ದು ಆ ಪ್ರಶ್ನೆಗಳು ಯಾವುವು ಎಂದು ನೋಡುವುದಾದರೆ,
- ಯಾವಾಗ ಪೆಂಡಿಂಗ್ ಇರುವಂತಹ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುತ್ತದೆ ?
- ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಆಗಿದೆಯೇ ಇಲ್ಲವೇ ಎಂಬುದನ್ನು ಹೇಗೆ ಪರಿಶೀಲಿಸಿಕೊಳ್ಳಬೇಕು?
- ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ಈಗಲೂ ಕೂಡ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಬಹುದಾ?
ಹೀಗೆ ಸಾಕಷ್ಟು ಪ್ರಶ್ನೆಗಳು ಕರ್ನಾಟಕ ರಾಜ್ಯದಲ್ಲಿ ಉದ್ಭವಿಸಿದ್ದು ಈ ಎಲ್ಲಾ ಪ್ರಶ್ನೆಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಇದನ್ನು ಓದಿ : ಉಚಿತ ಡ್ರೈವಿಂಗ್ ತರಬೇತಿ : ಸರ್ಕಾರದ ವತಿಯಿಂದ ಅರ್ಜಿ ಆಹ್ವಾನ
ಕರ್ನಾಟಕದ ಗೃಹಲಕ್ಷ್ಮಿ ಯೋಜನೆ :
ಕರ್ನಾಟಕದಲ್ಲಿ ಎಲ್ಲರಿಗೂ ತಿಳಿದಿರುವ ಹಾಗೆ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು ಅದರಂತೆ ಇದು ಗ್ಯಾರಂಟಿ ಯೋಜನೆಗಳಲ್ಲಿ ಒಂದು ಗೃಹಲಕ್ಷ್ಮಿ ಯೋಜನೆ ಯಾಗಿದ್ದು ಅಧಿಕಾರಕ್ಕೆ ಬಂದ ನಂತರ ಪ್ರತಿ ತಿಂಗಳು ಮನೆಯಲ್ಲಿ 2000ಗಳನ್ನು ನೀಡುವಂತಹ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿದೆ. ಈ ಯೋಜನೆ ಇದೀಗ ಯಶಸ್ವಿಯಾಗಿದ್ದು ಗೃಹಲಕ್ಷ್ಮಿ ಯೋಜನೆ ಸುಮಾರು 10 ತಿಂಗಳುಗಳನ್ನು ಪೂರೈಸಿ ಇದೀಗ ಫಲಾನುಭವಿಗಳಿಗೆ ಹನ್ನೊಂದನೇ ತಿಂಗಳಿನ ಹಣವನ್ನು ವರ್ಗಾವಣೆ ಮಾಡುವುದು ಬಾಕಿ ಇದೆ. ಯಾವ ಕಾರಣಕ್ಕಾಗಿ ಇದುವರೆಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಆಗಿಲ್ಲ ಎಂಬುದು ಸಾಕಷ್ಟು ಮಹಿಳೆಯರಲ್ಲಿ ಹಲವಾರು ಗೊಂದಲಗಳನ್ನು ಸೃಷ್ಟಿಸಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಣದ ಬಗ್ಗೆ ಸ್ಪಷ್ಟನೆ :
ಕೆಲವು ದಿನಗಳು ಗೃಹಲಕ್ಷ್ಮಿ ಯೋಜನೆಯ ಹಣ ವಿಳಂಬವಾಗಿರುವುದರಿಂದ ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ನಂಬಬೇಡಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ ಅಂದರೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವು ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ವರ್ಗಾವಣೆ ಯಾಗುತ್ತದೆ ಎಂಬ ಭರವಸೆಯನ್ನು ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಹಣ ವರ್ಗಾವಣೆ ಮಾಡಲು ವಿಳಂಬವಾಗಲು ಲೋಕಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯ ಫಲಿತಾಂಶ ಕ್ಕೋಸ್ಕರ ಸ್ವಲ್ಪ ದಿನಗಳ ಕಾಲ ವಿಳಂಬವಾಗಿತ್ತು ಹಾಗಾಗಿ ಯಾವುದೇ ರೀತಿಯ ಅಪಪ್ರಚಾರಕ್ಕೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದೆ ಅಂತ ಕಿವಿ ಕೊಡಬೇಡಿ ಎಂದು ತಿಳಿಸಿದ್ದಾರೆ.
ಪೆಂಡಿಂಗ್ ಹಣ ಯಾವಾಗ ಸಿಗಲಿದೆ ?
ಜನಸಾಮಾನ್ಯರು ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಬರದೆ ಇರುವ ಕಾರಣದಿಂದಾಗಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಬಹುದು ಹಾಗಾಗಿ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಹಾಗೂ ಇನ್ನು ಪೆಂಡಿಂಗ್ ಇರುವಂತಹ ಎಲ್ಲಾ ಕಾಂತಿನ ಹಣವನ್ನು ಕೂಡ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ತಿಳಿಸುತ್ತಿದೆ.
ಹಾಗಾಗಿ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಹಣ ಎಲ್ಲ ಒಟ್ಟಿಗೆ ಸೇರಿ ಹಣ ಇನ್ನೇನು ಕೆಲವೇ ದಿನಗಳಲ್ಲಿ ವರ್ಗಾವಣೆ ಆಗುತ್ತದೆ ಎಂಬ ಮಾಹಿತಿಯನ್ನು ತಿಳಿಸಿದ್ದಾರೆ. ಇದಷ್ಟೇ ಅಲ್ಲದೆ ಕೆಲವೊಂದು ತಾಂತ್ರಿಕ ದೋಷಗಳು ಇರುವ ಕಾರಣದಿಂದಾಗಿಯೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಮಾಡಲು ಸಾಧ್ಯವಾಗಿಲ್ಲ ಹಾಗಾಗಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹಾಗೂ ಐದು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಪಪ್ರಚಾರಕ್ಕೆ ಕಿವಿಗೊಳಬಾರದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಸದ್ಯ ಇದೀಗ ಜೂನ್ 30ನೇ ತಾರೀಕಿನಿಂದ ಹಿಡಿದು ಜುಲೈ 15ರ ಒಳಗಾಗಿ 15 ದಿನದ ಒಳಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಹಣವನ್ನು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಜಮಾ ಮಾಡಲು ರಾಜ್ಯ ಸರ್ಕಾರ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದೆ. ಹಾಗೂ 15 ದಿನಗಳವರೆಗೆ ಹಣವನ್ನು ಜಮಾ ಮಾಡಲು ಕಾಲಾವಕಾಶವನ್ನು ತೆಗೆದುಕೊಳ್ಳುತ್ತದೆ ಎಂಬುದರ ಬಗ್ಗೆ ಸ್ಪಷ್ಟಪಡಿಸಿದ್ದಾರೆ.
ಪೆಂಡಿಂಗ್ ಇರುವಂತಹ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮಹಿಳೆಯರು ಪಡೆದುಕೊಳ್ಳಬೇಕಾದರೆ ಕಡ್ಡಾಯವಾಗಿ ಕೊಟ್ಟಿರುವಂತಹ ಎಲ್ಲಾ ಮಾರ್ಗಗಳನ್ನು ಅನುಸರಿಸಬೇಕಾಗುತ್ತದೆ ಅದಷ್ಟೇ ಅಲ್ಲದೆ ಎಲ್ಲ ರೀತಿಯ ಲೋಕ ದೋಷಗಳನ್ನು ಪೂರ್ತಿಯಾಗಿ ಬಗೆಹರಿಸಿಕೊಂಡಾಗ ಮಾತ್ರ ಯಾವುದೇ ಅಡಚಣೆಗಳಿಲ್ಲದೆ ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾವಣೆ ಯಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಹಣ ಪರಿಶೀಲಿಸಿಕೊಳ್ಳುವ ವಿಧಾನ :
ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಆಗಿದೆಯೇ ಇಲ್ಲವೇ ಎಂಬುದರ ಬಗ್ಗೆ ಪರಿಶೀಲಿಸಿಕೊಳ್ಳಬೇಕಾದರೆ ಮೊದಲು ಫಲಾನುಭವಿಗಳು ಸರ್ಕಾರದ ಅಧಿಕೃತ ವೆಬ್ಸೈಟ್ ಅಥವಾ ಸರ್ಕಾರ ಬಿಡುಗಡೆ ಮಾಡಿರುವಂತಹ ಡಿಬಿಟಿ ಕರ್ನಾಟಕ ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವುದರ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ವರ್ಗಾವಣೆಯಾಗಿದೆ ಎಷ್ಟು ವರ್ಗಾವಣೆ ಆಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಉಚಿತವಾಗಿ ತಿಳಿದುಕೊಳ್ಳಬಹುದು.
ಹಣ ವರ್ಗಾವಣೆಯಾಗಿಲ್ಲದಿದ್ದರೆ ಏನು ಮಾಡಬೇಕು ?
ಒಂದು ವೇಳೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗಿಲ್ಲದಿದ್ದರೆ ಕೆಳಗೆ ತಿಳಿಸಿದ ಎಲ್ಲ ಮಾರ್ಗಗಳನ್ನು ಅನುಸರಿಸುವುದರ ಮೂಲಕ ನಿಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗುವಂತೆ ನೋಡಿಕೊಳ್ಳಬಹುದು.
- ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಎನ್‌ಪಿಸಿಐ ಮ್ಯಾಪಿಂಗ್ ಮಾಡಿಸಬೇಕು.
- ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು
- ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು
- ರೇಷನ್ ಕಾರ್ಡ್ ಗೆ ಈ ಕೆವೈಸಿ ಕಡ್ಡಾಯ
ಹೀಗೆ ಈ ಮೇಲಿನ ಎಲ್ಲ ಮಾಹಿತಿಗಳನ್ನು ಸರಿಪಡಿಸಿಕೊಳ್ಳಬೇಕಾದರೆ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ಆನಂತರ ಗೃಹಲಕ್ಷ್ಮಿ ಯೋಜನೆಯ ಹಣ ಬರುವಂತೆ ಮಾಡಿಕೊಳ್ಳಬಹುದು.
ಗೃಹಲಕ್ಷ್ಮಿ ಯೋಜನೆಗೆ ಬೇಕಾಗುವ ದಾಖಲೆಗಳು :
ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಆಧಾರ್ ಕಾರ್ಡ್.
- ರೇಷನ್ ಕಾರ್ಡ್.
- ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಆಗಿರುವಂತಹ ಮೊಬೈಲ್ ಸಂಖ್ಯೆ.
ಹೀಗೆ ಈ ಮೇಲಿನ ಎಲ್ಲದಕಲೆಗಳನ್ನು ಹೊಂದುವುದರ ಮೂಲಕ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈಗಲೂ ಕೂಡ ಅರ್ಜಿ ಸಲ್ಲಿಸಬಹುದಾ :
ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸುತ್ತಿರುವಂತಹ ಅಭ್ಯರ್ಥಿಗಳಿಗೆ ಈಗಲೂ ಕೂಡ ಅವಕಾಶವಿದ್ದು ಅಗತ್ಯ ದಾಖಲಾತಿಗಳೊಂದಿಗೆ ನಿಮ್ಮ ಹತ್ತಿರದ ಗ್ರಾಮ ಒಂದು ಕೇಂದ್ರಕ್ಕೆ ಭೇಟಿ ನೀಡಿ ಈಗಲೂ ಕೂಡ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಒಟ್ಟಾರೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಕೆಲವೊಂದು ಪ್ರಶ್ನೆಗಳಿಗೆ ಉತ್ತರವನ್ನು ತಿಳಿಸಿದ್ದು ಈ ಮಾಹಿತಿಯ ಬಗ್ಗೆ ನಿಮಗೆ ತಿಳಿದಿರುವ ಸ್ನೇಹಿತರು ಹಾಗು ಬಂಧು ಮಿತ್ರರಿಗೆ ಶೇರ್ ಮಾಡುವ ಮೂಲಕ ಅವರೇನಾದರೂ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಗೊಂದಲಗಳನ್ನು ಅನುಭವಿಸುತ್ತಿದ್ದರೆ ಅವರಿಗೆ ಈ ಮಾಹಿತಿಯ ಬಗ್ಗೆ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ:ಕರ್ನಾಟಕದಲ್ಲಿ ಉದ್ಯೋಗಾವಕಾಶ
- ಸರ್ಕಾರದಿಂದ ಮತ್ತೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ : ಇಂದೇ ಈ ಕೆಲಸ ಮಾಡಿ