ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತಹ ಮಹತ್ವದ ಯೋಜನೆ ಯಾದ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸಾರ್ವಜನಿಕ ವಲಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯ ಕುರಿತು ಎದ್ದಿರುವಂತಹ ಗೊಂದಲಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಆದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೂಕ್ತ ಕಾರಣವನ್ನು ನಿನ್ನೆ ನಡೆದಂತಹ ಪತ್ರಿಕಾಗೋಷ್ಠಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಪ್ರಕಟಣೆಯನ್ನು ತಿಳಿಸಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿರುವಂತಹ ಮಾಹಿತಿಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
ಅರ್ಹ ಫಲಾನುಭವಿಗಳಿಗೆ 2 ಸಾವಿರ ರೂಪಾಯಿ :
ರಾಜ್ಯ ಸರ್ಕಾರ ಜಾರಿಗೆ ತಂದಿರುವಂತಹ 5 ಗ್ಯಾರಂಟಿ ಯೋಜನೆಗಳಲ್ಲಿ ಸಾಕಷ್ಟು ಯಶಸ್ವಿ ಆಗಿರುವಂತಹ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆಯಾಗಿದೆ. ರಾಜ್ಯದ ಎಲ್ಲಾ ಅರ್ಹ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಅವರ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಸಾವಿರ ರೂಪಾಯಿಗಳ ಹಣವನ್ನು ಜಮಾ ಮಾಡುತ್ತಿತ್ತು.
ಆದರೆ ಕೆಲ ದಿನಗಳಿಂದ ಮಹಿಳೆಯರ ಬ್ಯಾಂಕ್ ಖಾತೆಗೆ ಕಳೆದ ಎರಡು ತಿಂಗಳಿಗೆ ಇದ್ದ ಮಹಿಳೆಯರ ಬ್ಯಾಂಕ್ ಖಾತೆಗೆ ಕಳೆದ ಎರಡು ತಿಂಗಳಿಗಳಿಂದ ಹಣವನ್ನು ಜವ ಮಾಡಿರುವುದಿಲ್ಲ ಇದರಿಂದಾಗಿ ಸಾಕಷ್ಟು ಗೊಂದಲಗಳು ಗೃಹಲಕ್ಷ್ಮಿ ಯೋಜನೆಯ ಕುರಿತಂತೆ, ರಾಜ್ಯದಲ್ಲೆಡೆ ಎದ್ದಿವೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇದಕ್ಕೆ ಪ್ರತಿಕ್ರಿಯಿಸಿದ್ದು ಯೋಜನೆಯ ಕುರಿತು ಸೂಕ್ತ ಸ್ಪಷ್ಟನೆಯನ್ನು ಸುದ್ದಿಗೋಷ್ಠಿಯಲ್ಲಿ ನೀಡಿದ್ದಾರೆ.
ಇದನ್ನು ಓದಿ : ಆಭರಣ ಖರೀದಿ ಮಾಡುವವರಿಗೆ ಸಿಹಿ ಸುದ್ದಿ : ಚಿನ್ನದ ಬೆಲೆಯಲ್ಲಿ ಮತ್ತಷ್ಟು ಕುಸಿತ!
ಇನ್ನು ಮುಂದೆ ಗ್ಯಾರಂಟಿ ಯೋಜನೆಯ ಹಣ ಬರುವುದಿಲ್ಲ :
ಗೃಹಲಕ್ಷ್ಮಿ ಯೋಜನೆಯ ಕುರಿತಂತೆ ಇನ್ನು ಮುಂದೆ ಗ್ಯಾರಂಟಿ ಯೋಜನೆಯ ಹಣ ಬರುವುದಿಲ್ಲ ಯೋಜನೆ ಸ್ಥಗಿತವಾಗಿದೆ ಯಾವುದೇ ಹೆಚ್ಚುವರಿ ಹಣವು ಸರ್ಕಾರದ ಬಳಿ ಇರುವುದಿಲ್ಲ ಎನ್ನುವ ಗೊಂದಲಕ್ಕೆ ಸಾರ್ವಜನಿಕ ವಲಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟವಾದಂತಹ ಮಾಹಿತಿಯನ್ನು ತಿಳಿಸಿದ್ದಾರೆ ಎಂದು ಹೇಳಬಹುದು.
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ :
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಆದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗ್ಯಾರಂಟಿ ಯೋಜನೆಯ ಸ್ಥಗಿತತೆ ಕುರಿತು ಮಾತನಾಡಿದ್ದು ಗೃಹಲಕ್ಷ್ಮಿ ಯೋಜನೆಯ ಜೊತೆಗೆ ಉಳಿದಂತಹ ಇನ್ನೂ ನಾಲ್ಕು ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತವಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಇದರ ಜೊತೆಗೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು 2000ಗಳ ಹಣವನ್ನು ಬಿಡುಗಡೆ ಮಾಡುವುದರಲ್ಲಿ ಯಾವುದೇ ರೀತಿ ವ್ಯತ್ಯಾಸ ಇರುವುದಿಲ್ಲವೆಂದು ಕೂಡ ಹೇಳಿದ್ದಾರೆ. ಮೇ ಒಂದರಂದು ಏಪ್ರಿಲ್ ತಿಂಗಳ ಹಣವನ್ನು ಜಮಾ ಮಾಡಲಾಗಿದೆ.
ಹಾಗೆಯೇ ಇನ್ನು ಮುಂದಿನ ಒಂದೆರಡು ದಿನಗಳಲ್ಲಿ ಮೇ ಮತ್ತು ಜೂನ್ ತಿಂಗಳ ಹಣವನ್ನು ಕೂಡ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಎಂದು ಸ್ಪಷ್ಟವಾದಂತಹ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಸ್ಟೇಟಸ್ ಚೆಕ್ ಮಾಡುವ ವಿಧಾನ :
ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಿದೆಯೇ ಇಲ್ಲವೇ ಎಂಬುದರ ಸ್ಟೇಟಸ್ ಅನ್ನು ಚೆಕ್ ಮಾಡಬೇಕಾದರೆ ಈ ಕೆಳಗಿನ ವಿಧಾನಗಳನ್ನು ಅನುಸರಿಸುವುದರ ಮೂಲಕ ಸುಲಭವಾಗಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದಾಗಿದೆ.
- ಮೊದಲನೇದಾಗಿ ಅರ್ಹ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿರುವುದರ ಸ್ಟೇಟಸ್ ಅನ್ನು ಚೆಕ್ ಮಾಡಬೇಕಾದರೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು ಅಥವಾ ಮೊಬೈಲ್ನಲ್ಲಿ ರಾಜ್ಯ ಸರ್ಕಾರದ ಅಧಿಕೃತ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
- ವೆಬ್ಸೈಟ್ : https://play.google.com/store/apps/details?id=com.dbtkarnataka
- ಮೊಬೈಲ್ ಅಪ್ಲಿಕೇಶನ್ ಅನ್ನು ಅಭ್ಯರ್ಥಿಗಳು ಡೌನ್ಲೋಡ್ ಮಾಡಿಕೊಂಡ ನಂತರ ಅದರಲ್ಲಿ ಆಧಾರ್ ಕಾರ್ಡ್ ನಂಬರನ್ನು ಹಾಕಬೇಕು.
- ಅದಾದ ನಂತರ ಪೇಮೆಂಟ್ ಸ್ಟೇಟಸ್ ಎಂಬುದರ ಮೇಲೆ ಕ್ಲಿಕ್ ಮಾಡಿದರೆ ಗೃಹಲಕ್ಷ್ಮಿ ಯೋಜನೆಯ ಜಮಾ ಆಗಿರುವುದರ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದಾಗಿದೆ.
ಹೀಗೆ ವೆಬ್ ಸೈಟ್ ಅಥವಾ ಅಪ್ಲಿಕೇಶನ್ ನಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಆಗಿದೆಯೇ ಇಲ್ಲವೇ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು.
ಫಲಾನುಭವಿಗಳ ಪಟ್ಟಿ ಚೆಕ್ ಮಾಡುವ ವಿಧಾನ :
ರಾಜ್ಯ ಸರ್ಕಾರ ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಚೆಕ್ ಮಾಡಲು ಮೊದಲು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://ahara.kar.nic.in/Home/EServices ಈ ವೆಬ್ ಸೈಟಿಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಕೆಲವೊಂದು ಹಂತಗಳನ್ನು ಅಂದರೆ ಪಡಿತರ ಚೀಟಿ ಎಂಬುದರ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ಹಳ್ಳಿಯ ಪಟ್ಟಿ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
- ಅದಾದ ನಂತರ ಪೇಜಿನಲ್ಲಿ ತಾಲೂಕು ಜಿಲ್ಲೆ ಗ್ರಾಮ ಪಂಚಾಯಿತಿಯ ಹಳ್ಳಿಯ ಹೆಸರನ್ನು ಆಯ್ಕೆ ಮಾಡಿಕೊಂಡು ಗೋ ಎಂಬುದರ ಬಟನ್ ಮೇಲೆ ಕ್ಲಿಕ್ ಮಾಡಬೇಕು.
- ಹೀಗೆ ಎಲ್ಲಾ ವಿಧಾನಗಳನ್ನು ಅನುಸರಿಸಿ ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯನ್ನು ತಿಳಿದುಕೊಳ್ಳಬಹುದು.
ಒಟ್ಟಾರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆಗೆ ಸ್ಥಗಿತವಾಗುತ್ತದೆ ಎಂಬುದರ ಸಾಕಷ್ಟು ಗೊಂದಲಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಆದ ಲಕ್ಷ್ಮಿ ಹೆಬ್ಬಾಳ್ಕರ್ ರವರು ನಿನ್ನೆ ನಡೆದಂತಹ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟವಾದ ಮಾಹಿತಿಯನ್ನು ರಾಜ್ಯದ ಜನತೆಗೆ ನೀಡಿದ್ದಾರೆ ಎಂದು ಹೇಳಬಹುದು.
ಹಾಗಾಗಿ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡುವ ಮೂಲಕ ರಾಜ್ಯ ಸರ್ಕಾರದಿಂದ ಯಾವುದೇ ರೀತಿಯ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗುವುದಿಲ್ಲ ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ಸರ್ಕಾರದಿಂದ 7ನೇ ವೇತನ ಆಯೋಗ ಜಾರಿ !
- ರೈಲ್ವೆ ಇಲಾಖೆ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್