ಜಿಲ್ಲಾ ನ್ಯಾಯಾಲಯದಲ್ಲಿ ಹೊಸ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್

ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಎರಡು ಆಗಾಗ ತನ್ನ ಇಲಾಖೆಗಳಲ್ಲಿ ಖಾಲಿ ಇರುವಂತಹ ಉದ್ಯೋಗಗಳಿಗೆ ಅರ್ಜಿಯನ್ನು ಆಹ್ವಾನ ಮಾಡುತ್ತದೆ.

New appointment in District Court
New appointment in District Court

ಅದರಂತೆ ಇದೀಗ ಕರ್ನಾಟಕ ಸರ್ಕಾರವು ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಕೆಲವೊಂದು ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಆಸಕ್ತಿ ಹೊಂದಿರುವ ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ, ಉದ್ಯೋಗವನ್ನು ಜಿಲ್ಲಾ ನ್ಯಾಯಾಲಯದಲ್ಲಿ ಪಡೆದುಕೊಳ್ಳಬಹುದಾಗಿದೆ. ಅದರಂತೆ ಯಾವ ಹುದ್ದೆಗಳು ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇವೆ ಎಂಬುದರ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ಹಂತ ಹಂತವಾಗಿ ತಿಳಿದುಕೊಳ್ಳಬಹುದು.

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳು :

ಸದ್ಯ ಇದೀಗ ಕರ್ನಾಟಕ ಸರ್ಕಾರ ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿದೆ.

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಹೇಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು, ಅರ್ಜಿ ಶುಲ್ಕದ ವಿವರ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಹಾಗೂ ಯಾವ ಹುದ್ದೆಗಳು ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇವೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಈ ಕೆಳಗಿನಂತೆ ತಿಳಿಯಬಹುದು.

ಹುದ್ದೆಯ ವಿವರ:

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಒಟ್ಟು 26 ಹುದ್ದೆಗಳು ಖಾಲಿ ಇದ್ದು ಯಾವ ಹುದ್ದೆಗಳು ಎಂದು ನೋಡುವುದಾದರೆ,

ಖಾಲಿ ಇರುವ ಹುದ್ದೆಯ ಹೆಸರು ಟೈಪಿಸ್ಟ್ ಮತ್ತು ಪ್ರೋಸೆಸ್ ಸರ್ವರ್
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ26
ಉದ್ಯೋಗದ ಸ್ಥಳಉತ್ತರ ಕನ್ನಡ ಕರ್ನಾಟಕ
ಟೈಪಿಸ್ಟ್3 ಹುದ್ದೆಗಳು
ಪ್ರಕ್ರಿಯೆ ಸರ್ವರ್20 ಹುದ್ದೆಗಳು
ಟೈಫಿಸ್ಟ್ ಕಾಪಿಸ್ಟ್3 ಹುದ್ದೆಗಳು

ಹೀಗೆ ಒಟ್ಟು ಉತ್ತರಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ 26 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ಅರ್ಜಿ ಶುಲ್ಕದ ವಿವರ ವೇತನ ಶ್ರೇಣಿ ಸಂಬಂಧಿಸಿ ದಂತೆ ಈ ಕೆಳಗಿನಂತೆ ವಿವರವಾಗಿ ನೋಡಬಹುದು.

ಶೈಕ್ಷಣಿಕ ಅರ್ಹತೆ :

ಉತ್ತರ ಕನ್ನಡ ಜಿಲ್ಲೆ ನ್ಯಾಯಾಲಯದಲ್ಲಿ ಖಾಲಿ ಇರುವಂತಹ 26 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಯು ಕೆಲವೊಂದು ಶೈಕ್ಷಣಿಕ ಅರ್ಹತೆಯನ್ನು ಪೂರ್ಣಗೊಳಿಸಿರಬೇಕು.

ಅಭ್ಯರ್ಥಿಯು ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ SSLC ಪಿಯುಸಿ ವಾಣಿಜ್ಯ ಅಭ್ಯಾಸದಲ್ಲಿ ಡಿಪ್ಲೋಮಾ ಪದವಿಯನ್ನು ಪೂರ್ಣಗೊಳಿಸಿರಬೇಕೆಂದು ತಿಳಿಸಲಾಗಿದೆ.

ಇದನ್ನು ಓದಿ : Bank of Baroda ನೇಮಕಾತಿ : ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನ ನಡೆಸುವವರಿಗೆ ಸಿಹಿ ಸುದ್ದಿ!

ವಯೋಮಿತಿ :

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳು ಇರಬೇಕೆಂದು ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ. ಅಷ್ಟೇ ಅಲ್ಲದೆ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ವಯಸ್ಸಿನ ಮಿತಿಯನ್ನು ವರ್ಗಗಳಿಗೆ ಅನುಸಾರವಾಗಿ ಸಡಿಲಿಕ್ಕೆ ಮಾಡಲಾಗಿದೆ.

  1. 5 ವರ್ಷಗಳು : SC-ST CA-1 ಅಭ್ಯರ್ಥಿಗಳಿಗೆ.
  2. 3 ವರ್ಷಗಳು : 2a 2b 3a 3b ಅಭ್ಯರ್ಥಿಗಳಿಗೆ
  3. 10 ವರ್ಷಗಳು : PWBD ಅಥವಾ ವಿಧವೆ ಅಭ್ಯರ್ಥಿಗಳಿಗೆ
    ಹೀಗೆ ವರ್ಗಗಳಿಗೆ ಅನುಸಾರವಾಗಿ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ ಹಾಗಾಗಿ ಅಭ್ಯರ್ಥಿಗಳು ಸರಿಯಾದ ರೀತಿಯಲ್ಲಿ ಅಧಿಸೂಚನೆಯನ್ನು ನೋಡಿಕೊಂಡು ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕದ ವಿವರ :

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳಿಗೆ ವರ್ಗಗಳಿಗೆ ಅನುಸಾರವಾಗಿ ನಿಗದಿಪಡಿಸಲಾಗಿದೆ.

  1. 100 ರೂಪಾಯಿ : SC-ST CA-1 ಅಭ್ಯರ್ಥಿಗಳಿಗೆ.
  2. 150 ರೂಪಾಯಿ : 2a 2b 3a 3b ಅಭ್ಯರ್ಥಿಗಳಿಗೆ
  3. 300 ರೂಪಾಯಿ : ಸಾಮಾನ್ಯ ಅಭ್ಯರ್ಥಿಗಳಿಗೆ
    ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರವೇ ಪಾವತಿ ಮಾಡಬೇಕು ಅದಾದ ನಂತರವೇ ತಮ್ಮ ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾಗಿದೆ ಎಂದರ್ಥ.

ವೇತನ ಶ್ರೇಣಿ :

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಒಟ್ಟು 26 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 19500 ರೂಪಾಯಿಗಳಿಂದ 42,000ಗಳ ವೇತನವನ್ನು ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ನಿಗದಿಪಡಿಸಲಾಗಿದೆ.

ಆಯ್ಕೆಯ ವಿಧಾನ :

ಜಿಲ್ಲಾ ನ್ಯಾಯಾಲಯ ನೇಮಕಾತಿ ಸಂಸ್ಥೆಯು ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಜಿಲ್ಲ ನ್ಯಾಯಾಲಯ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಸ್ಪಷ್ಟವಾಗಿ ಅಭ್ಯರ್ಥಿಗಳಿಗೆ ತಿಳಿಸಿದೆ.

ಅರ್ಜಿ ಸಲ್ಲಿಸುವ ವಿಧಾನ :

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಸಲ್ಲಿಸಬೇಕು. ಆನ್ಲೈನ್ ಮುಖಾಂತರ ಸಲ್ಲಿಸುವ ಸಂದರ್ಭದಲ್ಲಿ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸಬೇಕಾಗುತ್ತದೆ ಆಗ ಮಾತ್ರ ಅರ್ಜಿಯನ್ನು ಸುಲಭವಾಗಿ ಸಲ್ಲಿಕೆ ಮಾಡಲು ಸಾಧ್ಯವಾಗುತ್ತದೆ.

ಅದರಂತೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ ಯಾವುದೆಂದರೆ, https://uttarakannada.dcourts.gov.in/ಈ ವೆಬ್ ಸೈಟ್ ಗೆ ಭೇಟಿ ನೀಡಿ ಯಾವ ಹುದ್ದೆಗಳು ಖಾಲಿ ಇವೆ ಹಾಗೂ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ಸರಿಯಾದ ರೀತಿಯಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆ PDF ನೋಡಿ
ಅಧೀಕೃತ ಜಾಲತಾಣ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 26 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಪ್ರಮುಖ ದಿನಾಂಕಗಳ ಬಗ್ಗೆ ತಿಳಿದುಕೊಂಡಿರಬೇಕು. ಅರ್ಜಿಯನ್ನು ಸಲ್ಲಿಸಲು ಆರಂಭ ದಿನಾಂಕ ಹಾಗೂ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂದು ನೋಡುವುದಾದರೆ,

  1. ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ : 20-06-2024
  2. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 19-07-2024
  3. ಅರ್ಜಿ ಶುಲ್ಕವನ್ನು ಮಾಡಲು ಇರುವ ಕೊನೆಯ ದಿನಾಂಕ : 20-07-2024
    ಹೀಗೆ ಈ ನಿಗದಿತ ದಿನಾಂಕದೊಳಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ಮುಖಾಂತರ ಪಾವತಿ ಮಾಡಬೇಕು ಆಗ ಮಾತ್ರ ಸರಿಯಾದ ರೀತಿಯಲ್ಲಿ ಅರ್ಜಿ ಸಲ್ಲಿಕೆಯಾಗಿದೆ ಎಂದರ್ಥವಾಗುತ್ತದೆ.

ಒಟ್ಟಾರೆ ಕರ್ನಾಟಕ ಸರ್ಕಾರವು ತನ್ನ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತಹ ಉದ್ಯೋಗಗಳಿಗೆ ಸಂಬಂಧಿಸಿದಂತೆ ಆಗದಿ ಸೂಚನೆಯನ್ನು ಹೊರಡಿಸುತ್ತಿರುತ್ತದೆ.

ಇವತ್ತಿನ ಲೇಖನದಲ್ಲಿ ಉತ್ತರ ಕನ್ನಡ ಜಿಲ್ಲೆ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 26 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಹಾಗೂ ನೇಮಕಾತಿಗೆ ಅರ್ಹತೆಯನ್ನು ಹೊಂದಿರುವ ಪ್ರತಿಯೊಬ್ಬರು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ತಮ್ಮ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ ಹಾಗಾಗಿ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh