SSC Recruitment : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ನೇಮಕಾತಿ : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸದ್ಯ ಇದೀಗ ಎಸ್ ಎಸ್ ಸಿ ಸ್ಟಾಫ್ ಎಸ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಈ ಹುದ್ದೆಗಳ ಬಗ್ಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಲೇಖನದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು.

Recruitment by Staff Selection Commission
Recruitment by Staff Selection Commission

SSC ನೇಮಕಾತಿ :

ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಇದೀಗ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸಲು ಇರಬೇಕಾದ ಅರ್ಹತೆಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಮುಖ ದಿನಾಂಕಗಳು ಒಟ್ಟು ಖಾಲಿ ಇರುವಂತಹ ಹುದ್ದೆಗಳ ಸಂಖ್ಯೆ ಅರ್ಜಿ ಶುಲ್ಕದ ವಿವರ ಅರ್ಜಿ ಸಲ್ಲಿಸುವ ವಿಧಾನ ಅಧಿಕೃತ ವೆಬ್ಸೈಟ್ಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ತಿಳಿದುಕೊಳ್ಳಬಹುದು.

ಹುದ್ದೆಗಳ ವಿವರ :

ಖಾಲಿ ಇರುವ ಹುದ್ದೆಯ ಹೆಸರು SSC . CGL ವಿವಿಧ ಹುದ್ದೆಗಳು
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ17,727
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ಮುಖಾಂತರ
ಉದ್ಯೋಗದ ಸ್ಥಳ ಭಾರತ
ಅಧಿಕೃತ ವೆಬ್ಸೈಟ್ https://ssc.gov.in

ಈ ವೆಬ್ ಸೈಟ್ ಗೆ ಭೇಟಿ ನೀಡಿ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದಂತಹ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು.

ಶೈಕ್ಷಣಿಕ ಅರ್ಹತೆ :

ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ಯಾವುದಾದರೂ ಒಂದು ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.

  1. ಕಡ್ಡಾಯವಾಗಿ 10ನೇ ತರಗತಿಯನ್ನು ಪಾಸಾಗಿರಬೇಕು.
  2. 12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  3. ಪದವಿಯನ್ನು ಪೂರ್ಣಗೊಳಿಸಿರಬೇಕು.
    ಹೀಗೆ ಈ ಮೇಲಿನ ಯಾವುದಾದರೂ ಒಂದು ವಿದ್ಯಾರ್ಹತೆ ಯನ್ನು ಹೊಂದಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಸಾರವಾಗಿ ಅರ್ಜಿ ಸಲ್ಲಿಸಬಹುದು.

ಇದನ್ನು ಓದಿ : NIT ಕರ್ನಾಟಕ ನೇಮಕಾತಿ : ಅರ್ಜಿ ಸಲ್ಲಿಸಲು ಈ ತಿಂಗಳೆ ಕೊನೆ ದಿನಾಂಕ ನೋಡಿ !

ವಯಸ್ಸಿನ ಮಿತಿ :

ಸ್ಟಾಫ್ ಸೆಲೆಕ್ಷನ್ ಕಮಿಟಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳು. ಅಭ್ಯರ್ಥಿಗಳಿಗೆ ವರ್ಗಗಳಿಗೆ ಅನುಸಾರವಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.

  1. OBC ಅಭ್ಯರ್ಥಿಗಳಿಗೆ 3 ವರ್ಷಗಳು
  2. SC-ST ಅಭ್ಯರ್ಥಿಗಳಿಗೆ 5 ವರ್ಷಗಳು
  3. ಅಂಗವಿಕಲ ಸಾಮಾನ್ಯ ಅಭ್ಯರ್ಥಿಗಳಿಗೆ : 10 ವರ್ಷಗಳು
  4. ಅಂಗವಿಕಲ SC-ST ಅಭ್ಯರ್ಥಿಗಳಿಗೆ : 15 ವರ್ಷಗಳು
  5. ಅಂಗವಿಕಲ OBC ಅಭ್ಯರ್ಥಿಗಳಿಗೆ : 13 ವರ್ಷಗಳು
  6. ಮಾಜಿ ಸೈನಿಕ ಸಾಮಾನ್ಯ ಅಭ್ಯರ್ಥಿಗಳಿಗೆ : 3 ವರ್ಷಗಳು
  7. ಮಾಜಿ ಸೈನಿಕ SC-ST ಅಭ್ಯರ್ಥಿಗಳಿಗೆ : 8 ವರ್ಷಗಳು
    ಹೀಗೆ ವರ್ಗಗಳಿಗೆ ಅನುಸಾರವಾಗಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದ್ದು ಈ ವಯಸ್ಸಿನ ಮಿತಿಯ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದಾಗಿದೆ.

ವೇತನ ಶ್ರೇಣಿ :

ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ 25,500 ಗಳಿಂದ ರೂ.1,42400ಗಳನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕದ ವಿವರ :

ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ವರ್ಗಗಳಿಗೆ ಅನುಸಾರವಾಗಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

  1. OBC ಅಬ್ಯರ್ಥಿ ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ ರೂ.100
  2. SC -ST ಅಭ್ಯರ್ಥಿಗಳಿಗೆ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆಯ ಪ್ರಕ್ರಿಯೆ :

ಸ್ಟಾಪ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಈ ಕೆಳಗಿನ ವಿಧಾನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

  1. ಕಂಪ್ಯೂಟರ್ ಆಧಾರಿತ ಪರೀಕ್ಷೆ – 1
  2. ಕಂಪ್ಯೂಟರ್ ಆಧಾರಿತ ಪರೀಕ್ಷೆ- 2
  3. ಸಂದರ್ಶನ
    ಹೀಗೆ ಈ ಮೇಲಿನ ವಿಧಾನಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

ಸ್ಟಾಫ್ ಸೆಲೆಕ್ಷನ್ ನೇಮಕಾತಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ https://ssc.gov.in ಈ ವೆಬ್ ಸೈಟಿಗೆ ಭೇಟಿ ನೀಡಿ ಸುಲಭವಾಗಿ ಅರ್ಜಿಯನ್ನು ನಿಗದಿತ ದಿನಾಂಕ ದೊಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆ PDF ನೋಡಿ
ಅಧೀಕೃತ ಜಾಲತಾಣ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು :

ಸ್ಟಾಫ್ ಸೆಲೆಕ್ಷನ್ ಕಮಿಷನ್ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪ್ರಮುಖ ದಿನಾಂಕಗಳ ಬಗ್ಗೆ ತಿಳಿದಿರಬೇಕು.

  1. ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಧಿಸೂಚನೆ ಬಿಡುಗಡೆ ಮಾಡಿರುವ ದಿನಾಂಕ : 24 ಜೂನ್ 2024
  2. ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಪ್ಲಿಕೇಶನ್ ಪ್ರಾರಂಭ ದಿನಾಂಕ : 24 ಜೂನ್ 2024
  3. ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಪ್ಲಿಕೇಶನ್ ಕೊನೆಯ ದಿನಾಂಕ : 25 ಜುಲೈ 2024
  4. ಅರ್ಜಿ ನಮೂನೆ ತಿದ್ದುಪಡಿಗಾಗಿ ಇರುವಂತಹ ದಿನಾಂಕ : 11 ಆಗಸ್ಟ್ 2024
  5. ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ : 25 ಜುಲೈ 2024
  6. ಪರೀಕ್ಷೆಯ ದಿನಾಂಕ ಶ್ರೇಣಿ 1 : ಸೆಪ್ಟೆಂಬರ್ ಅಕ್ಟೋಬರ್ 2024
  7. ಪರೀಕ್ಷೆಯ ದಿನಾಂಕ ಶ್ರೇಣಿ 2 : ಡಿಸೆಂಬರ್ 2024

ಒಟ್ಟಾರೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಹಾಗೂ ಅರ್ಹತೆ ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ಅದಾದ ನಂತರ ಅರ್ಜಿಯನ್ನು ಸಲ್ಲಿಸುವುದು ಉತ್ತಮವಾಗಿದೆ. ಈ ಉದ್ಯೋಗದ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh