ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಬೃಹತ್ 586 ಹುದ್ದೆಗಳಿಗೆ ನೇಮಕಾತಿ: ತಕ್ಷಣ ಅಪ್ಲೈ ಮಾಡಿ

ನಮಸ್ಕಾರ ಸ್ನೇಹಿತರೆ ನಿರುದ್ಯೋಗ ಯುವಕ ಯುವತಿಯರಿಗೆ ಇವತ್ತಿನ ಲೇಖನದಲ್ಲಿ ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಕರ್ನಾಟಕ ಸರ್ಕಾರವು ಆಗಾಗ ಉದ್ಯೋಗಾವಕಾಶದ ಬಗ್ಗೆ ತಿಳಿಸುತ್ತಿದ್ದು ಇದೀಗ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

Recruitment for huge 586 posts in Karnataka Gramin Bank
Recruitment for huge 586 posts in Karnataka Gramin Bank

ಸರ್ಕಾರಿ ಉದ್ಯೋಗವನ್ನು ಪಡೆಯಬೇಕೆಂಬ ಆಸೆ ಹೊಂದಿರುವ ಪ್ರತಿಯೊಬ್ಬರೂ ಕೂಡ ಈ ಒಂದು ಉದ್ಯೋಗದ ಬಗ್ಗೆ ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ, ಗ್ರಾಮೀಣ ಬ್ಯಾಂಕ್ ನಲ್ಲಿ ಕಾರ್ಯನಿರ್ವಹಿಸಬಹುದಾಗಿದೆ. ಅಲ್ಲದೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ವೃತ್ತಿ ಜೀವನವನ್ನು ನಡೆಸಬೇಕೆಂಬ ಆಸೆಯನ್ನು ಹೊಂದಿರುವ ಪ್ರತಿಯೊಬ್ಬರೂ ಕೂಡ ಕರ್ನಾಟಕ ಸರ್ಕಾರದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇವತ್ತಿನ ಲೇಖನದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಹುದ್ದೆಗಳ ಹೆಸರು ಖಾಲಿ ಇರುವ ಹುದ್ದೆಗಳ ಸಂಖ್ಯೆ ಅರ್ಜಿ ಸಲ್ಲಿಸುವ ವಿಧಾನ ನೇಮಕಾತಿಯ ವಿವರ ನೇಮಕಾತಿ ಸಂಸ್ಥೆ ಉದ್ಯೋಗದ ಸ್ಥಳ ಅರ್ಜಿ ಶುಲ್ಕದ ವಿವರ ವಯೋಮಿತಿ ಶೈಕ್ಷಣಿಕ ಅರ್ಹತೆ ಸೇರಿದಂತೆ ಉದ್ಯೋಗಕ್ಕೆ ಸಂಬಂಧಿಸಿದಂತ ಪ್ರತಿಯೊಂದು ಮಾಹಿತಿಯನ್ನು ಸಂಪೂರ್ಣವಾಗಿ ಈ ಲೇಖನದಲ್ಲಿ ತಿಳಿಯಬಹುದು.

ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳು :

ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಒಟ್ಟು 586 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಉದ್ಯೋಗದ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಂಡು ಅದಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ವಿವರವನ್ನು ನೋಡುವುದಾದರೆ.

ಹುದ್ದೆಗಳ ಹೆಸರುಕಚೇರಿ ಸಹಾಯಕ ಹಾಗೂ ಅಧಿಕಾರಿ
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ586 ಖಾಲಿ ಹುದ್ದೆಗಳು
ಉದ್ಯೋಗದ ಸ್ಥಳಕರ್ನಾಟಕ
ನೇಮಕಾತಿ ಸಂಸ್ಥೆಕರ್ನಾಟಕ ಗ್ರಾಮೀಣ ಬ್ಯಾಂಕ್
ಕಚೇರಿ ಸಹಾಯಕ ಹುದ್ದೆಗಳು200
ಅಧಿಕಾರಿ ಸ್ಕೇಲ್1386 ಹುದ್ದೆಗಳು

ಹೀಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಒಟ್ಟು 586 ಹುದ್ದೆಗಳು ಖಾಲಿ ಇದ್ದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಪಡೆಯಬೇಕೆಂಬ ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಸರ್ಕಾರದಿಂದ ಉದ್ಯೋಗವನ್ನು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪಡೆದುಕೊಳ್ಳಬಹುದು.

ಶೈಕ್ಷಣಿಕ ಅರ್ಹತೆ :

ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಕೆಲವೊಂದು ಶೈಕ್ಷಣಿಕ ಅರ್ಹತೆಗಳನ್ನು ಪೂರ್ಣಗೊಳಿಸಬೇಕಾಗುತ್ತದೆ. ಅದರಂತೆ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕೆಂದು ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಮೂಲಕ ತಿಳಿಸಲಾಗಿದೆ.

ಇದನ್ನು ಓದಿ : ಜಿಲ್ಲಾ ಪಂಚಾಯತ್ ಹೊಸ ನೇಮಕಾತಿ : ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

ವಯಸ್ಸಿನ ಮಿತಿ :

ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ವಯಸ್ಸಿನ ಮಿತಿಯನ್ನು ತಿಳಿದುಕೊಂಡಿರಬೇಕು.

ಅದರಂತೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಹುದ್ದೆಗಳಿಗೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕೆಂದು ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ. ಇದಷ್ಟೇ ಅಲ್ಲದೆ ವಯಸ್ಸಿನ ಮಿತಿಯಲ್ಲಿ ವರ್ಗಗಳಿಗೆ ಅನುಸಾರವಾಗಿ ಸಡಿಲಿಕ್ಕೆ ಮಾಡಲಾಗಿದೆ. ಯಾವ ಯಾವ ವರ್ಗಗಳಿಗೆ ಎಷ್ಟು ವಯಸ್ಸಿನ ಮಿತಿಯಲ್ಲಿ ಸಡಿಲಿಕ್ಕೆ ಮಾಡಲಾಗಿದೆ ಎಂದು ನೋಡುವುದಾದರೆ,

  1. OBC ಅಭ್ಯರ್ಥಿಗಳಿಗೆ : 3 ವರ್ಷಗಳು
  2. SC -ST ಅಭ್ಯರ್ಥಿಗಳಿಗೆ :5 ವರ್ಷಗಳು
  3. PWBD ಅಭ್ಯರ್ಥಿಗಳಿಗೆ : 10 ವರ್ಷಗಳವರೆಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಶುಲ್ಕದ ವಿವರ :

ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ಕಚೇರಿ ಸಹಾಯಕ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಈ ಅರ್ಜಿ ಶುಲ್ಕವು ವರ್ಗಗಳಿಗೆ ಹಾಗೂ ಹುದ್ದೆಗಳಿಗೆ ಅನುಸಾರವಾಗಿ ನಿಗದಿಪಡಿಸಲಾಗಿದ್ದು ಎಷ್ಟು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕೆಂದು ನೋಡುವುದಾದರೆ,

ಅಧಿಕಾರಿ ಸ್ಕೇಲ್ 1 ಹುದ್ದೆಗೆ :

  1. ಇತರ ಎಲ್ಲಾ ಅಭ್ಯರ್ಥಿಗಳಿಗೆ : 850
  2. SC-ST PWBD ಅಭ್ಯರ್ಥಿಗಳಿಗೆ : 175

ಕಚೇರಿ ಸಹಾಯಕ ಹುದ್ದೆ :

  1. ಇತರ ಎಲ್ಲಾ ಅಭ್ಯರ್ಥಿಗಳಿಗೆ : 850
  2. SC-ST PWBD ಅಭ್ಯರ್ಥಿಗಳಿಗೆ : 175
    ಹೀಗೆ ಹುದ್ದೆಗಳಿಗೆ ಅನುಸಾರವಾಗಿ ಹಾಗೂ ವರ್ಗಗಳಿಗೆ ಅನುಸಾರವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು ಈ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಆನ್ಲೈನ್ ಮುಖಾಂತರವೇ ಪಾವತಿ ಮಾಡಬೇಕಾಗುತ್ತದೆ.

ವೇತನ ಶ್ರೇಣಿ :

ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಮಾಸಿಕ ವೇತನವನ್ನು ಅಭ್ಯರ್ಥಿಗಳಿಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ನಿಗದಿಪಡಿಸಲಾಗಿದೆ. ಆದರೆ ಎಷ್ಟು ಎಂಬುದರ ಬಗ್ಗೆ ಈ ಲೇಖನದಲ್ಲಿ ಸ್ಪಷ್ಟ ಮಾಹಿತಿ ಇರುವುದಿಲ್ಲ. ಇದರ ಬಗ್ಗೆ ಅಧಿಸೂಚನೆಯಲ್ಲಿ ತಿಳಿದ ನಂತರವೇ ಮಾಸಿಕ ವೇತನದ ಬಗ್ಗೆ ಸ್ಪಷ್ಟವಾಗಿ ತಿಳಿಯಬಹುದು.

ಆಯ್ಕೆಯ ವಿಧಾನ :

ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ಅಧಿಕಾರಿ ಹಾಗೂ ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ ಎಂಬುದರ ಮಾಹಿತಿಯನ್ನು ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ :

  • ಅರ್ಜಿಯನ್ನು ಅಭ್ಯರ್ಥಿಗಳು ಆನ್ಲೈನ್ ಮುಖಾಂತರವೇ ಸಲ್ಲಿಸಬೇಕಾಗುತ್ತದೆ ಅದರಂತೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಭ್ಯರ್ಥಿಗಳು ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
  • ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಹಾಗೂ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
  • ಅದರಂತೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • ಅಂದರೆ ಕರ್ನಾಟಕ ಗ್ರಾಮೀಣ ಬ್ಯಾಂಕ್‍ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅದರಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
  • ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ https://karnatakagraminabank.com/ಈ ವೆಬ್ಸೈಟ್ಗೆ ಅಭ್ಯರ್ಥಿಗಳು ಭೇಟಿ ನೀಡಬೇಕು.
  • ಈ ವೆಬ್ಸೈಟ್ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ ಹಾಗೂ ವೃತ್ತಿಗಳನ್ನು ಪರಿಶೀಲಿಸಿ ಕಚೇರಿ ಸಹಾಯಕ ಹಾಗೂ ಅಧಿಕಾರಿ ಉದ್ಯೋಗಿಗಳಿಗೆ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
  • ಅರ್ಜಿ ನಮೂನೆಯನ್ನು ಅಭ್ಯರ್ಥಿಗಳು ಡೌನ್ಲೋಡ್ ಮಾಡಿಕೊಂಡ ನಂತರ ಕೊನೆಯ ದಿನಾಂಕವನ್ನು ಮೊದಲು ಪರಿಶೀಲಿಸಬೇಕು ಅದಾದ ನಂತರ ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಿ ನಿಗದಿತ ದಿನಾಂಕದೊಳಗೆ ಕೆಳಗೆ ತಿಳಿಸಲಾದ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.
  • ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಅರ್ಜಿ ನಮೂನೆಯ ಸಂಖ್ಯಾ ಅಥವಾ ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿ ಇರಿಸಬೇಕಾಗುತ್ತದೆ.

ಹೆಚ್ಚಿನ ಮಾಹಿತಿ :

ಅಧಿಸೂಚನೆ ಮಾಹಿತಿ PDF ನೋಡಿ
ಅಧೀಕೃತ ಜಾಲತಾಣ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ ಅಪ್ಲೈ ಮಾಡಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ಕರ್ನಾಟಕ ಗ್ರಾಮೀಣ ಬ್ಯಾಂಕಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಪ್ರಮುಖ ದಿನಾಂಕಗಳ ಬಗ್ಗೆ ಹೆಚ್ಚಿನ ಗಮನವನ್ನು ಅಭ್ಯರ್ಥಿಗಳು ವಹಿಸಬೇಕು ಅದರಂತೆ ಆಸಕ್ತಿ ಹೊಂದಿರುವ ಹಾಗೂ ಅರ್ಹ ಅಭ್ಯರ್ಥಿಗಳು ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಅದರಂತೆ ಅರ್ಜಿಯನ್ನು ಸಲ್ಲಿಸಲು ಹಾಗೂ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಪ್ರಮುಖ ದಿನಾಂಕಗಳು ನೋಡುವುದಾದರೆ,

  1. ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಆರಂಭದ ದಿನಾಂಕ : 07-06-2024
  2. ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 27-06-2024
  3. ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 27-06-2024
    ಹೀಗೆ ಈ ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಅಭ್ಯರ್ಥಿಗಳು ಸಲ್ಲಿಸಬೇಕಾಗುತ್ತದೆ.

ಒಟ್ಟಾರೆ ನಿರುದ್ಯೋಗ ಯುವಕ ಯುವತಿಯರಿಗೆ ಕರ್ನಾಟಕ ಸರ್ಕಾರವು ಆಗಾಗಿ ಉದ್ಯೋಗವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಇದೀಗ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಲಾಗಿದೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ವೃತ್ತಿ ಜೀವನವನ್ನು ನಡೆಸಬೇಕೆಂದು ಆಸಕ್ತಿ ಹೊಂದಿರುವ ಪ್ರತಿಯೊಬ್ಬರಿಗೂ ಈ ಮಾಹಿತಿಯು ಹೆಚ್ಚು ಉಪಯೋಗವಾಗಲಿದ್ದು ಹಾಗಾಗಿ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡುವ ಮೂಲಕ ಅವರೇನಾದರೂ ಉದ್ಯೋಗವನ್ನು ಹುಡುಕುತ್ತಿದ್ದರೆ ಕರ್ನಾಟಕ ಸರ್ಕಾರದಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂಬುದರ ಈ ಮಾಹಿತಿಯ ಬಗ್ಗೆ ತಿಳಿಸಿ ಧನ್ಯವಾದಗಳು.

Leave a Reply

Your email address will not be published. Required fields are marked *

rtgh