ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ನೇಮಕಾತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ ಪ್ರತಿನಿತ್ಯ ನಿಮಗೆ ಒಂದಲ್ಲ ಒಂದು ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸುತ್ತೇವೆ. ಅದೇ ರೀತಿಯಾಗಿ ಇದೀಗ ಸರ್ಕಾರಿ ಉದ್ಯೋಗದ ಬಗ್ಗೆ ಇವತ್ತಿನ ಲೇಖನದಲ್ಲಿ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಇದೀಗ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.

Recruitment in Govt Apprenticeship and Training Centre
Recruitment in Govt Apprenticeship and Training Centre

ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ನೇಮಕಾತಿಗೆ ಬೇಕಾದಂತಹ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ತಿಳಿದುಕೊಂಡು ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸುವುದು ಸೂಕ್ತ.

ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ನೇಮಕಾತಿ :

ಸದ್ಯ ಇದೀಗ ಸರ್ಕಾರ ತನ್ನಲ್ಲಿ ಇರುವಂತಹ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗುತ್ತಿದ್ದು ನಿರುದ್ಯೋಗ ಯುವಕ ಯುವತಿಯರು ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಲು ಇದೊಂದು ಸುವರ್ಣವಕಾಶವೆಂದು ಹೇಳಬಹುದು.

ಅದರಂತೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಯಾವ ಹುದ್ದೆ ಖಾಲಿ ಇದೆ, ಈ ಹುದ್ದೆಗಳಿಗೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಶುಲ್ಕದ ವಿವರ ವಯಸ್ಸಿನ ಮಿತಿ ಶೈಕ್ಷಣಿಕ ಅರ್ಹತೆ ಉದ್ಯೋಗದ ಸ್ಥಳ ಹಾಗೂ ಅರ್ಜಿಯನ್ನು ಯಾವ ರೀತಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು. ಈ ಕೆಳಗಿನಂತೆ ಉದ್ಯೋಗಕ್ಕೆ ಸಂಬಂಧಿಸಿದಂತೆ ಹುದ್ದೆಗಳ ವಿವರಗಳನ್ನು ನೋಡುವುದಾದರೆ.

ಖಾಲಿ ಇರುವ ಹುದ್ದೆಗಳ ಹೆಸರು GTTC ಹುದ್ದೆಗಳು
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ98
ಉದ್ಯೋಗದ ಸ್ಥಳ ಕರ್ನಾಟಕ
ನೇಮಕಾತಿ ಸಂಸ್ಥೆಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ

ಒಟ್ಟು 98 GTTC ಹುದ್ದೆಗಳು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇದ್ದು ಇದೀಗ ಈ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

ಹುದ್ದೆಗಳ ಹೆಸರು :

ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಯಾವ ಹುದ್ದೆಗಳು ಖಾಲಿ ಇವೆ ಎಂದು ನೋಡುವುದಾದರೆ.

ಉಪನ್ಯಾಸಕ ಇಂಜಿನಿಯರಿಂಗ್30 ಹುದ್ದೆಗಳು
ಇಂಜಿನಿಯರ್2 ಹುದ್ದೆ
ಅಧಿಕಾರಿ ಗ್ರೈಂಡರ್ 2 ಹುದ್ದೆಗಳು
ಫ್ಲೋರ್ ಮ್ಯಾನ್ ಗ್ರೇಡ್ 24 ಹುದ್ದೆಗಳು
ಇನ್ಸ್ಪೆಕ್ಟರ್ ಗ್ರೇಡ್ -115 ಹುದ್ದೆಗಳು
ತಂತ್ರಜ್ಞಾನ ಗ್ರೇಡ್ -2 8 ಹುದ್ದೆಗಳು
ತಂತ್ರಜ್ಞಾ ಗ್ರೇಡ್ -323 ಹುದ್ದೆಗಳು
ತಂತ್ರಜ್ಞಾನ ಗೈಡ್ -4 4 ಹುದ್ದೆಗಳು
ಸಹಾಯಕ ಗ್ರೇಡ್ -25 ಹುದ್ದೆಗಳು
ಒಟ್ಟು ಹುದ್ದೆಗಳು 98

ಹೀಗೆ ವಿವಿಧ ಹುದ್ದೆಗಳು ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇದ್ದು ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದು.

ಶೈಕ್ಷಣಿಕ ಅರ್ಹತೆ :

ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಒಟ್ಟು 98 ಹುದ್ದೆಗಳು ಖಾಲಿ ಇದ್ದು ಹುದ್ದೆಗಳಿಗೆ ಅನುಸಾರವಾಗಿ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

ಈ ಶೈಕ್ಷಣಿಕ ಅರ್ಹತೆಯು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ. ಅದರಂತೆ ಯಾವ ಯಾವ ಹುದ್ದೆಗಳಿಗೆ ಏನೆಲ್ಲ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕೆಂದು ನೋಡುವುದಾದರೆ,

  1. ಉಪನ್ಯಾಸಕ ಇಂಜಿನಿಯರಿಂಗ್ : ಮೆಕಾನಿಕ್ಸ್ ಇಂಜಿನಿಯರಿಂಗ್ ಅಥವಾ ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ಅಥವಾ ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಅಥವಾ ಟೆಕ್ನಾಲಜಿಯಲ್ಲಿ ಸ್ನಾತಕೋತರ ಪದವಿಯನ್ನು ಅಭ್ಯರ್ಥಿಗಳು ಪೂರ್ಣಗೊಳಿಸಿರಬೇಕು.
  2. ಇಂಜಿನಿಯರ್ : ಇಂಜಿನಿಯರ್ ಹುದ್ದೆಗೆ ಅಭ್ಯರ್ಥಿಯು ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಥವಾ ಪ್ರೊಡಕ್ಷನ್ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕಾಗುತ್ತದೆ
  3. ಅಧಿಕಾರಿ ಗ್ರೇಡ್ -2 : ಈ ಹುದ್ದೆಗೆ ಅಭ್ಯರ್ಥಿಯು ಕಲೆ ಅಥವಾ ವಿಜ್ಞಾನ ಅಥವಾ ವ್ಯಾಪಾರ ನಿರ್ವಹಣೆಯಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
  4. ಫೋರ್ ಮ್ಯಾನ್ ಗ್ರೇಡ್ -2 : ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಥವಾ ತುಳು ಮತ್ತು ಡೈ ಮೇಕಿಂಗ್ ನಲ್ಲಿ ಡಿಪ್ಲೋಮಾ ಪದವಿಯನ್ನು ಪೂರ್ಣಗೊಳಿಸಿರಬೇಕು.
  5. ಬೋಧಕ ಗ್ರೇಡ್ -1 ಹಾಗೂ ತಂತ್ರಜ್ಞಾನ -2 : ಡಿಪ್ಲೋಮ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಪದವಿಯನ್ನು ಪೂರ್ಣಗೊಳಿಸಿರಬೇಕು
  6. ಬೋಧಕ ಗ್ರೇಡ್-2 : ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಪದವಿಯನ್ನು ಪೂರ್ಣಗೊಳಿಸಿರಬೇಕು.
  7. ತಂತ್ರಜ್ಞಾನ ಗ್ರೇಡ್ -3 : ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಮೆಕಾಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ನಲ್ಲಿ ಡಿಪ್ಲೋಮಾ ಪದವಿಯನ್ನು ಪೂರ್ಣಗೊಳಿಸಿರಬೇಕು.
  8. ತಂತ್ರಜ್ಞಾನ ಗ್ರೇಡ್ -4 : ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಮಷೀನ್ ಟೂಲ್ ನಿರ್ವಹಣೆಯಲ್ಲಿ ಐಟಿಐ ಪದವಿಯನ್ನು ಪೂರ್ಣಗೊಳಿಸಿರಬೇಕು.
  9. ಅಸಿಸ್ಟೆಂಟ್ ಗ್ರೇಡ್ -2 : ಕಲೆ ಅಥವಾ ವಾಣಿಜ್ಯ ಅಥವಾ ವಿಜ್ಞಾನ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು, ಸೆಕ್ರೆಟರಿ ಪ್ರಾಕ್ಟೀಸ್ ಅಥವಾ ಮಾರ್ಡನ್ ಆಫೀಸ್ ಪ್ರಾಕ್ಟೀಸ್ ಅಥವಾ ವಾಣಿಜ್ಯ ಅಭ್ಯಾಸ ಅಥವಾ ಬಿಸಿನೆಸ್ ಮ್ಯಾನೇಜ್ಮೆಂಟ್ ನಲ್ಲಿ ಡಿಪ್ಲೋಮಾ ಪದವಿಯನ್ನು ಪೂರ್ಣಗೊಳಿಸಿರಬೇಕು.
    ಹೀಗೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಥಿಯನ್ನು ಹೊಂದಿರಬೇಕೆಂದು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.

ಇದನ್ನು ಓದಿ : ಜಿಲ್ಲಾ ಪಂಚಾಯತ್ ಹೊಸ ನೇಮಕಾತಿ : ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

ವಯಸ್ಸಿನ ಮಿತಿ :

ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ಒಟ್ಟು 98 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ವಯಸ್ಸಿನ ಮಿತಿಯನ್ನು ತಿಳಿದಿರಬೇಕು ಅದರಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಟ 27 ವರ್ಷಗಳು ಹೊಂದಿರಬೇಕೆಂದು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ನೇಮಕಾತಿ ಆದಿ ಸೂಚನೆಯ ಪ್ರಕಾರ ತಿಳಿಸಲಾಗಿದೆ. ಅಷ್ಟೇ ಅಲ್ಲದೆ ವರ್ಗಗಳಿಗೆ ಅನುಸಾರವಾಗಿ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.

  1. 3 ವರ್ಷಗಳು : 2A 2B 3A 3B ಅಭ್ಯರ್ಥಿಗಳಿಗೆ
  2. 5 ವರ್ಷಗಳು : SC-ST CA-1 ಅಥವಾ ಎಕ್ಸರ್ವಿಸ್ ಮ್ಯಾನ್ ಅಭ್ಯರ್ಥಿ ಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.
    ಹೀಗೆ ಅಭ್ಯರ್ಥಿಗಳು ವಯಸ್ಸಿನ ಮಿತಿಗೆ ಅನುಗುಣವಾಗಿ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಅರ್ಜಿ ಶುಲ್ಕದ ವಿವರ :

ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವಂತಹ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಪಾವತಿ ಮಾಡಬೇಕಾಗುತ್ತದೆ. ಈ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳಿಗೆ ವರ್ಗಗಳಿಗೆ ಅನುಸಾರವಾಗಿ ನಿಗದಿಪಡಿಸಲಾಗಿದೆ.

  1. 750 ರೂಪಾಯಿ ಸಾಮಾನ್ಯ ಅಥವಾ OBC ಅಭ್ಯರ್ಥಿಗಳಿಗೆ
  2. 250 ರೂಪಾಯಿ PWBD ಅಭ್ಯರ್ಥಿಗಳಿಗೆ
  3. 500 ರೂಪಾಯಿSC-ST CA-1 ಅಥವಾ ಎಕ್ಸರ್ವಿಸ್ ಮ್ಯಾನ್ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
    ಅಭ್ಯರ್ಥಿಗಳು ವರ್ಗಗಳಿಗೆ ಅನುಸಾರವಾಗಿ ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿ ಮಾಡಬೇಕು.

ವೇತನ ಶ್ರೇಣಿ :

ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಸರ್ಕಾರಿ ಉಪಕರಣಗಾರ ಸೂಚನೆಯ ಪ್ರಕಾರ 23500 ರಿಂದ 88,300 ರುಪಾಯಿಗಳ ವೇತನವನ್ನು ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿ : HAL Recruitment : ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ಹೆಚ್ಚಿನ ಮಾಹಿತಿ

ಆಯ್ಕೆಯ ವಿಧಾನ :

ಸರ್ಕಾರಿ ಉಪಕರಣಗಾರ ಬರ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ನೇಮಕಾತಿ ಅಧಿಸೂಚನೆಯ ಪ್ರಕಾರ ಸ್ಪಷ್ಟವಾಗಿ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆ PDF ಇಲ್ಲಿದೆ ಕ್ಲಿಕ್ ಮಾಡಿ
ಅಧೀಕೃತ ಜಾಲತಾಣ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ವಿಧಾನ :

ಸರ್ಕಾರದ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಯಾವ ರೀತಿ ಅರ್ಜಿಯನ್ನು ಸಲ್ಲಿಸಬೇಕೆಂದು ತಿಳಿದುಕೊಂಡಿರಬೇಕು. ಅದರಂತೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರುವ ಅಧಿಕೃತ ವೆಬ್ಸೈಟ್ https://gttc.karnataka.gov.in/ಈ ವೆಬ್ ಸೈಟ್ ಗೆ ಭೇಟಿ ನೀಡಿ ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು :

  1. ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ :16-06-2024
  2. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 29-06-2024
  3. ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ 01-07-2024
    ಹೀಗೆ ನಿಗದಿತ ದಿನಾಂಕದೊಳಗೆ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಬಹುದು.

ಒಟ್ಟಾರೆ ರಾಜ್ಯ ಸರ್ಕಾರವು ರಾಜ್ಯದಲ್ಲಿ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡಿ ಇದರಿಂದ ಅವರು ಕೂಡ ಉದ್ಯೋಗ ಪಡೆದುಕೊಳ್ಳಲಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh