ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರಿಗಾಗಿ ಹಲವಾರು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿವೆ. ಅದರಂತೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ಈ ಒಂದು ಯೋಜನೆಯ ಬಗ್ಗೆ ಶೇಕಡ 90ರಷ್ಟು ಜನರಿಗೆ ಈ ಯೋಜನೆಗೆ ಸಂಬಂಧಿಸಿ ದಂತೆ ಮಾಹಿತಿಯು ತಿಳಿದಿರುವುದಿಲ್ಲ.
ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಪ್ರಧಾನಮಂತ್ರಿ ಮಾತೃತ್ವ ವಂದನ ಯೋಜನೆಯನ್ನು ಜಾರಿಗೆ ತಂದಿದ್ದು ಈ ಒಂದು ಯೋಜನೆ ವಿಶೇಷವಾಗಿ ಗರ್ಭಿಣಿ ಮಹಿಳೆಯರಿಗಾಗಿ ಜಾರಿಗೆ ತರಲಾಗಿದೆ. ಈ ಯೋಜನೆಯನ್ನು ಕೇಂದ್ರ ಸರ್ಕಾರ ಮಹಿಳೆಯರಿಗೆ ಸಹಾಯವಾಗಲಿ ಎನ್ನುವ ಉದ್ದೇಶದಿಂದ ಜಾರಿಗೆ ತಂದಿದೆ.
ಪ್ರಧಾನಮಂತ್ರಿ ಮಾತೃತ್ವ ವಂದನ ಯೋಜನೆ :
ಮಹಿಳೆಯರಿಗೆ ಸಹಾಯವಾಗಲಿ ಹಾಗೂ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕೆ ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಇನ್ನು ಕೇಂದ್ರ ಸರ್ಕಾರ ಗರ್ಭಿಣಿ ಮಹಿಳೆಯರಿಗೆ ಸಹಾಯ ಮಾಡುವ ಉದ್ದೇಶದಿಂದ ಹೊಸದೊಂದು ಯೋಜನೆಯನ್ನು ಜಾರಿಗೆ ತಂದಿದ್ದು ಈ ಒಂದು ಯೋಜನೆಯ ಮೂಲಕ ಅವರ ಆರೋಗ್ಯ ಮತ್ತು ಮಗುವಿನ ಆರೋಗ್ಯವನ್ನು ಕೂಡ ಗರ್ಭಿಣಿ ಮಹಿಳೆಯರು ಚೆನ್ನಾಗಿ ನೋಡಿಕೊಳ್ಳಬಹುದಾಗಿದೆ.
ವಿಶೇಷವಾಗಿ ಗರ್ಭಿಣಿ ಮಹಿಳೆಯರಿಗಾಗಿ ಕೇಂದ್ರ ಸರ್ಕಾರ ಪಿಎಂ ಮಾತೃತ್ವ ವಂದನ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಅನುಸಾರವಾಗಿ ಗರ್ಭಿಣಿ ಮಹಿಳೆಯರು ತಮ್ಮ ಆರೋಗ್ಯವನ್ನು ಸುಧಾರಿಸಿಕೊಂಡು ತಮ್ಮ ಮಗುವಿಗೆ ಬೇಕಾದಂತಹ ರಕ್ತಹೀನತೆ, ಪೌಷ್ಠಿಕ ಆಹಾರದ ಕೊರತೆ ಇದ್ಯಾವುದು ಆಗದ ರೀತಿಯಲ್ಲಿ ಮಹಿಳೆಯರು ನೋಡಿಕೊಳ್ಳಬಹುದಾಗಿದೆ. ಈ ಒಂದು ಯೋಜನೆಯ ಅಡಿಯಲ್ಲಿ ಗರ್ಭಿಣಿ ಮಹಿಳೆಯರು ಮಗುವಿಗೆ ಬರುವಂತಹ ಆರೋಗ್ಯದ ಸಮಸ್ಯೆಯನ್ನು ತಡೆಗಟ್ಟಬಹುದಾಗಿದೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಒಂದು ಯೋಜನೆಯು ಬಡತನದಲ್ಲಿ ಇರುವಂತಹ ಮಹಿಳೆಯರಿಗೆ ಸಾಕಷ್ಟು ಉಪಯೋಗವಾಗಲಿದ್ದು ಮಗುವಿನ ಆರೋಗ್ಯಕ್ಕೆ ಮತ್ತು ಗರ್ಭಿಣಿ ತನ್ನ ಆರೋಗ್ಯಕ್ಕೆ ಹೆಚ್ಚು ಹಣವನ್ನು ಖರ್ಚು ಮಾಡಲು ಸಾಧ್ಯವಾಗುವುದಿಲ್ಲ ಅಂಥವರಿಗೆ ಈ ಯೋಜನೆ ಆರ್ಥಿಕ ಸಹಾಯ ಮಾಡಲಿದೆ.
ಇದನ್ನು ಓದಿ : ಸರ್ಕಾರದಿಂದ BPL ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ : ಶೀಘ್ರದಲ್ಲೇ ಸಿಗಲಿದೆ ಹೊಸ ಕಾರ್ಡ್
ಪ್ರಧಾನಮಂತ್ರಿ ಮಾತೃತ್ವ ವಂದನಾ ಯೋಜನೆಯಿಂದ ಆರ್ಥಿಕ ಸಹಾಯ :
ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆಯ ಅಡಿಯಲ್ಲಿ ಮೊದಲನೇ ಬಾರಿ ಹಾಗೂ ಎರಡನೇ ಬಾರಿ ಗರ್ಭಿಣಿಯಾದಂತಹ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಈ ಒಂದು ಯೋಜನೆಯಲ್ಲಿ ಒಟ್ಟು 11000 ಹಣವನ್ನು ನೀಡಲಾಗುತ್ತದೆ. ಮೊದಲ ಬಾರಿಗೆ ಮಹಿಳೆ ಗರ್ಭಿಣಿಯಾದಾಗ ಮೊದಲ ಮಗುವಿಗೆ ಒಂದು ಸಾವಿರ ರೂಪಾಯಿಗಳ ಹಣವನ್ನು ನೀಡಲಾಗುತ್ತದೆ. ಗರ್ಭಿಣಿಯಾದ ಆರು ತಿಂಗಳ ನಂತರ 2000 ರೂಪಾಯಿಗಳ ಹಣವನ್ನು ಹಾಗೂ ಮಗು ಹುಟ್ಟಿದ ನಂತರ 2,000ಗಳ ಹಣವನ್ನು ಈ ಯೋಜನೆಯ ಮೂಲಕ ನೀಡಲಾಗುತ್ತದೆ ಒಟ್ಟು ಈ ಯೋಜನೆಯಿಂದ 5000 ಹಣವನ್ನು ಗರ್ಭಿಣಿ ಮಹಿಳೆಯರ ಬ್ಯಾಂಕ್ ಖಾತೆಗೆ ಡಿವಿಟಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ. ಒಂದು ವೇಳೆ ಗರ್ಭಿಣಿ ಎರಡನೇ ಮಗುವಿಗೆ ಜನ್ಮ ನೀಡುತ್ತಿದ್ದಾರೆ ಅವಳಿಗೆ 6000 ರೂಪಾಯಿಗಳ ಹಣವನ್ನು ನೀಡಲಾಗುತ್ತದೆ. ಹೀಗೆ ಪ್ರಧಾನಮಂತ್ರಿ ಮಾತೃತ್ವ ವಂದನ ಯೋಜನೆಯ ಮೂಲಕ ಕೇಂದ್ರ ಸರ್ಕಾರದಿಂದ 11,000 ಹಣವನ್ನು ಗರ್ಭಿಣಿ ಮಹಿಳೆಯರಿಗೆ ನೀಡಲಾಗುತ್ತದೆ.
ಪ್ರಧಾನಮಂತ್ರಿ ಮಾತೃತ್ವ ವಂದನ ಯೋಜನೆಗೆ ಅರ್ಜಿ ಸಲ್ಲಿಸಲು ದಾಖಲೆಗಳು :
ಪ್ರಧಾನ ಮಂತ್ರಿ ಮಾತೃತ್ವ ವಂದನೆ ಯೋಜನೆಯ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿ ಹನ್ನೊಂದು ಸಾವಿರ ರೂಪಾಯಿಗಳ ಹಣವನ್ನು ಗರ್ಭಿಣಿ ಮಹಿಳೆಯರು ಪಡೆದುಕೊಳ್ಳಬೇಕಾದರೆ ಈ ಕೆಲವೊಂದು ಪ್ರಮುಖ ದಾಖಲೆಗಳನ್ನು ಹೊಂದಿರಬೇಕು.
- ಭರ್ತಿ ಮಾಡಿದಂತಹ ಅಪ್ಲಿಕೇಶನ್ ಅರ್ಜಿ.
- ತಾಯಿ ಮತ್ತು ಮಗುವಿಗೆ ವ್ಯಾಕ್ಸಿನೇಷನ್ ಹಾಕಿಸಿರುವ ಕಾಪಿ
- ತಾಯಿಯ ಆಧಾರ್ ಕಾರ್ಡ್
- ಆಧಾರ್ ಕಾರ್ಡ್ ಜೊತೆ ಲಿಂಕ್ ಆಗಿರುವಂತಹ ಬ್ಯಾಂಕ್ ಅಕೌಂಟ್
- ರೇಷನ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ನರೇಗಾ ಕಾರ್ಡ್
- ಆಯುಷ್ಮಾನ್ ಕಾರ್ಡ್
ಹೀಗೆ ಈ ಮೇಲಿನ ಎಲ್ಲ ದಾಖಲೆಗಳನ್ನು ಹೊಂದುವುದರ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರ ಸಹಾಯವನ್ನು ಪಡೆದು ಈ ಸೌಲಭ್ಯವನ್ನು ಸರ್ಕಾರದಿಂದ ಗರ್ಭಿಣಿ ಮಹಿಳೆಯರು ಪಡೆದುಕೊಳ್ಳಬಹುದಾಗಿದೆ.
ಒಟ್ಟಾರೆ ಕೇಂದ್ರ ಸರ್ಕಾರವು ಮಹಿಳೆಯರ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಂತೆ ಗರ್ಭಿಣಿ ಮಹಿಳೆಯರಿಗೂ ಕೂಡ ಕೇಂದ್ರ ಸರ್ಕಾರ ಒಂದು ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ 11000 ಹಣವನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾಗಿ ಈ ಯೋಜನೆಯ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು ;
- ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್ಟಾಪ್ : ಈ ಕೂಡಲೇ ಅರ್ಜಿ ಸಲ್ಲಿಸಿ
- ಸರ್ಕಾರದಿಂದ ರೈತರಿಗೆ ಸಿಗಲಿದೆ 3000 ಹಣ ತಕ್ಷಣ ಈ ಕೆಲಸ ಮಾಡಿ