ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಜಿಲ್ಲಾ ಪಂಚಾಯತ್ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಈ ಮಾಹಿತಿಯು ನಿರುದ್ಯೋಗ ಯುವಕ ಯುವತಿಯರಿಗೆ ಹೆಚ್ಚು ಸಹಾಯಕವಾಗಲಿದೆ.
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿನಲ್ಲಿ ಖಾಲಿ ಇರುವಂತಹ ತಾಂತ್ರಿಕ ಸಹಾಯಕ ಮತ್ತು ಜಿಲ್ಲೆಯ ಎಂಐಎಸ್ ಸಂಯೋಜಕರು ಹುದ್ದೆಗೆ ಇದೀಗ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಆಸಕ್ತಿ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಹತೆಯನ್ನು ಪೂರ್ಣಗೊಳಿಸುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅದರಂತೆ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಎಷ್ಟು ಹುದ್ದೆಗಳು ಖಾಲಿ ಇವೆ.
ಉದ್ಯೋಗದ ಸ್ಥಳ ಹುದ್ದೆಗಳ ವಿವರ ವಿದ್ಯಾರ್ಹತೆ ವಯಸ್ಸಿನ ಮಿತಿ ಅರ್ಜಿ ಶುಲ್ಕದ ವಿವರ ವೇತನ ಶ್ರೇಣಿ ಆಯ್ಕೆಯ ವಿಧಾನ ಅರ್ಜಿ ಸಲ್ಲಿಸುವ ವಿಧಾನಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಅಭ್ಯರ್ಥಿಗಳು ಎಲ್ಲ ಅರ್ಹತೆಗಳನ್ನು ಹೊಂದಿದ್ದರೆ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊರಡಿಸಲಾಗಿರುವ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದುವುದರ ಮೂಲಕ ಸರಿಯಾದ ರೀತಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಪೂರ್ಣವಾದ ವಿವರವನ್ನು ನೋಡುವುದಾದರೆ.
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಹುದ್ದೆಗಳು :
ಸದ್ಯ ಇದೀಗ ರಾಜ್ಯ ಸರ್ಕಾರ ರಾಜ್ಯದಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗುತ್ತಿದ್ದು ಇದೀಗ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಮತ್ತು ಜಿಲ್ಲಾ ಎಮ್ಐಎಸ್ ಸಂಯೋಜಕರು ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ನೇಮಕಾತಿಗೆ ಬೇಕಾದಂತಹ ಎಲ್ಲ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದಂತೆ ವಿವರವನ್ನು ನೋಡುವುದಾದರೆ,
ಹುದ್ದೆಗಳ ಹೆಸರು | ತಾಂತ್ರಿಕ ಸಹಾಯಕ ಮತ್ತು ಜಿಲ್ಲಾ ಎಂಐಎಸ್ ಸಂಯೋಜಕರು |
ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ | 05 |
ಉದ್ಯೋಗದ ಸ್ಥಳ | ಬೆಂಗಳೂರು (ಕರ್ನಾಟಕ) |
ಬೆಂಗಳೂರಿನ ನಗರ ಜಿಲ್ಲಾ ಪಂಚಾಯತ್ ನಲ್ಲಿ ಈ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಸಂಬಂಧಿಸಿದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿಯೇ ಉದ್ಯೋಗವನ್ನು ನೀಡಲಾಗುತ್ತದೆ.
ಹುದ್ದೆಗಳ ಹೆಸರು :
- ಜಿಲ್ಲಾ MIS ಕೋ ಆರ್ಡಿನೇಟರ್
- ತಾಂತ್ರಿಕ ಸಹಾಯಕರು
- ತಾಂತ್ರಿಕ ಸಹಾಯಕರು (ಅರಣ್ಯ)
- ತಾಂತ್ರಿಕ ಸಹಾಯಕರು (ರೇಷ್ಮೆ)
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನಲ್ಲಿ ಒಟ್ಟು ಈ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ, ಉದ್ಯೋಗವನ್ನು ಪಡೆದುಕೊಳ್ಳಬಹುದು.
ಶೈಕ್ಷಣಿಕ ಅರ್ಹತೆ :
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅಭ್ಯರ್ಥಿಗಳು ಏನೆಲ್ಲಾ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕೆಂದು ನೋಡುವುದಾದರೆ,
- ಜಿಲ್ಲಾ ಎಂಐಎಸ್ ಕಾರ್ಡಿನೇಟರ್ ಹುದ್ದೆಗೆ : ಬಿ ಇ ಅಥವಾ ಬಿಟೆಕ್ ಎಂ ಸಿ ಎ ಹಾಗೂ ಕಂಪ್ಯೂಟರ್ ಸೈನ್ಸ್ ಅನ್ನು ಪೂರ್ಣಗೊಳಿಸಿರಬೇಕು
- 2. ತಾಂತ್ರಿಕ ಸಹಾಯಕರು ಹುದ್ದೆಗೆ : ಬಿ ಇ ಅಥವಾ b.tech civil engineering with basic computer knowledge including use of internet diploma in civil with basic computer profidency and knowledge including use of internet
- ತಾಂತ್ರಿಕ ಸಹಾಯಕರು ಅರಣ್ಯ ಹುದ್ದೆಗೆ : B.sc
- ತಾಂತ್ರಿಕ ಸಹಾಯಕರು ರೇಷ್ಮೆ ಹುದ್ದೆಗೆ : B.sc
ಹೀಗೆ ರಾಜ್ಯ ಸರ್ಕಾರವು ಹುದ್ದೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು.
ಉದ್ಯೋಗದ ಹೆಚ್ಚಿನ ಮಾಹಿತಿ
ಅಧೀಕೃತ ಅಧಿಸೂಚನೆ | PDF ಡೌನ್ಲೋಡ್ |
ಅಧೀಕೃತ ಜಾಲತಾಣ | ಇಲ್ಲಿದೆ ನೋಡಿ |
ಅರ್ಜಿ ಲಿಂಕ್ | ಕ್ಲಿಕ್ ಮಾಡಿ |
ವಯಸ್ಸಿನ ಮಿತಿ :
ಬೆಂಗಳೂರು ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ವಯಸ್ಸಿನ ಮಿತಿಯನ್ನು ಕೂಡ ನಿಗದಿಪಡಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಕನಿಷ್ಠ 21 ಮತ್ತು ಗರಿಷ್ಠ 40 ವರ್ಷವಯೋಮಿತಿಯನ್ನು ಹೊಂದಿರಬೇಕೆಂದು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
ಅರ್ಜಿ ಶುಲ್ಕದ ವಿವರ :
ಬೆಂಗಳೂರು ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಯಾವುದೇ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಿ ಇರುವುದಿಲ್ಲ ಎಂದು ನೇಮಕಾತಿ ಅಧಿ ಸೂಚನೆಯ ಪ್ರಕಾರ ತಿಳಿಸಲಾಗಿದೆ.
ವೇತನ ಶ್ರೇಣಿ :
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಒಟ್ಟು ಐದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆದ ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಜಿಲ್ಲಾMIS ಕೋ ಆರ್ಡಿನೇಟರ್ | 34000 |
ತಾಂತ್ರಿಕ ಸಹಾಯಕ ಹುದ್ದೆಗೆ | 28,000 |
ತಾಂತ್ರಿಕ ಸಹಾಯಕರು ಅರಣ್ಯ ಹುದ್ದೆಗೆ | 28,000 |
ತಾಂತ್ರಿಕ ಸಹಾಯಕರು ರೇಷ್ಮೆ ಹುದ್ದೆಗೆ | 28,000 |
ಆಯ್ಕೆಯ ವಿಧಾನ :
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. https://zpbengaluruurban.karnataka.gov.in/
ಈ ವೆಬ್ ಸೈಟ್ ಗೆ ಭೇಟಿ ನೀಡಿ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಕೊನೆಯ ದಿನಾಂಕವನ್ನು ಪರಿಶೀಲಿಸಬೇಕು ಹಾಗೂ ಅಧಿಕೃತ ವೆಬ್ಸೈಟ್ನಲ್ಲಿ ತಾಂತ್ರಿಕ ಸಹಾಯಕ ಮತ್ತು ಜಿಲ್ಲಾ ಎಮ್ಐಎಸ್ ಸಂಯೋಜಕರು ಹುದ್ದೆಗಳಿಗೆ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ಅರ್ಜುನ ಮನೆಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಿ .
ಸ್ವಯಂ ದೃಢೀಕರಣ ಅಗತ್ಯ ದಾಖಲೆಗಳನ್ನು ನಿಗದಿತ ದಿನಾಂಕ ದೊಳಗಾಗಿ ಕೆಳಗೆ ತಿಳಿಸಲಾಗುವ ವಿಳಾಸಕ್ಕೆ ಕಳುಹಿಸಿ ಆಫ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಇರುವ ವಿಳಾಸ :
Bengaluru urban Zilla panchayat,
Near Banashankari Temple,
S.Kariyappa Road,
Banashankari,
Bengaluru -560070 ನಿಗದಿತ ದಿನಾಂಕದೊಳಗೆ ಈ ವಿಳಾಸಕ್ಕೆ ತಮ್ಮ ಅರ್ಜಿ ನಮೂನೆಯನ್ನು ಹಾಗೂ ಅಗತ್ಯ ದಾಖಲೆಗಳನ್ನು ಕಳುಹಿಸಬೇಕು.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಪ್ರಮುಖ ದಿನಾಂಕಗಳನ್ನು ತಿಳಿದುಕೊಂಡಿರಬೇಕು ಅದರಂತೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಪ್ರಾರಂಭ ದಿನಾಂಕ ಯಾವುದು ಎಂದು ನೋಡುವುದಾದರೆ,
- ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ : 07-06-2024
- ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 02-07-2024
ಈ ನಿಗದಿತ ದಿನಾಂಕದೊಳಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟಾರೆ ರಾಜ್ಯ ಸರ್ಕಾರವು ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲಾಗುತ್ತಿದ್ದು ಇದೀಗ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಒಟ್ಟು ಐದು ಹುದ್ದೆಗಳಿಗೆ ಸಂಬಂಧಿಸಿದಂತೆ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.
ಹಾಗಾಗಿ ಈ ಹುದ್ದೆಗಳಿಗೆ ಸಂಬಂಧಿಸಿದ ಈ ಮಾಹಿತಿಯ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವುದರ ಮೂಲಕ ಅವರೇನಾದರೂ ಬೆಂಗಳೂರಿನಲ್ಲಿ ಕೆಲಸ ಮಾಡುವಂತ ಆಸಕ್ತಿಹೊಂದಿದ್ದರೆ ಅವರಿಗೆ ಇವತ್ತಿನ ಲೇಖನದಲ್ಲಿ ತಿಳಿಸಲಾಗಿರುವ ಮಾಹಿತಿಯು ಹೆಚ್ಚು ಉಪಯುಕ್ತವಾಗಲಿದೆ. ಹಾಗಾಗಿ ಈ ಮಾಹಿತಿಯ ಬಗ್ಗೆ ನಿಮಗೆ ತಿಳಿದಿರುವ ಸ್ನೇಹಿತರು ಹಾಗೂ ಸಂಬಂಧಿಕರಿಗೆ ಶೇರ್ ಮಾಡಿ ಧನ್ಯವಾದಗಳು.